ಹಂಪಿ: ಇಂದಿನಿಂದ ಮತ್ತೆ ಸಮೀಕ್ಷೆ

ಬುಧವಾರ, ಮೇ 22, 2019
34 °C

ಹಂಪಿ: ಇಂದಿನಿಂದ ಮತ್ತೆ ಸಮೀಕ್ಷೆ

Published:
Updated:

ಹೊಸಪೇಟೆ: ಐತಿಹಾಸಿಕ ಹಂಪಿಯ ರಥಬೀದಿಯ ನಂತರ ಇದೀಗ ವಿರೂಪಾಕ್ಷೇಶ್ವರ ದೇವಾಲಯದ ಸುತ್ತಲೂ ನಿರ್ಮಾಣವಾಗಿರುವ ಅಕ್ರಮ ಕಟ್ಟಡಗಳನ್ನು ಸಮೀಕ್ಷೆ ಮಾಡುವ ಕಾರ್ಯವನ್ನು ಭಾರತೀಯ ಸರ್ವೇಕ್ಷಣಾ ಇಲಾಖೆ ಬುಧವಾರದಿಂದ ಆರಂಭಿಸಲಿದೆ.ಹೈಕೋರ್ಟ್ ನಿರ್ದೇಶನದಂತೆ ಹಂಪಿಯಲ್ಲಿ ನಿರ್ಮಾಣವಾಗಿರುವ ಅನಧಿಕೃತ ಕಟ್ಟಡಗಳ ಸರ್ವೇ ಕಾರ್ಯಾಚರಣೆಗೆ ಸಿದ್ದಗೊಳ್ಳುತ್ತಿದ್ದ ಭಾರತೀಯ ಸರ್ವೇಕ್ಷಣಾ ಇಲಾಖಾ ಅಧಿಕಾರಿಗಳಿಗೆ ಸ್ಥಳೀಯರು ಅಡ್ಡಿ ಪಡಿಸುತ್ತಿದ್ದು, ಸರ್ವೇ ಕಾರ್ಯ ಸಾಧ್ಯ ಆಗುತ್ತಿಲ್ಲ ಎಂದು ನಿರ್ದೇಶನಾಲಯ ತಿಳಿಸಿದೆ.ಈ ಹಿನ್ನೆಲೆಯಲ್ಲಿ ಸೋಮವಾರ ಹೈಕೋರ್ಟ್‌ನ ವಿಭಾಗೀಯ ಪೀಠ ಹಂಪಿ ಅಭಿವೃದ್ಧಿ ವಿಶ್ವಪರಂಪರಾ ಪ್ರದೇಶಾಭಿವೃದ್ಧಿ ನಿರ್ವಹಣಾ ಪ್ರಾಧಿಕಾರ ಇಲಾಖೆಗೆ ಸೂಕ್ತ ಪೊಲೀಸ ಭದ್ರತೆಯನ್ನು ಒದಗಿಸಬೇಕು ಮತ್ತು ಇದೇ 12ರೊಳಗೆ ಸರ್ವೇ ಕಾರ್ಯ ಮುಗಿಸಿ ಹೈಕೋರ್ಟ್‌ಗೆ ಮಾಹಿತಿ ಸಲ್ಲಿಸಲು ತಿಳಿಸಿರುವ ಕಾರಣ ಬುಧವಾರ ಭಾರತೀಯ ಸರ್ವೇಕ್ಷಣಾ ಅಧಿಕಾರಿಗಳ ತಂಡ ಹೊಸಪೇಟೆಗೆ ಆಗಮಿಸಿ ಸರ್ವೇ ಕಾರ್ಯವನ್ನು ಆರಂಭಿಸಲಿದೆ ಎಂದು ಸ್ಥಳೀಯ ಅಧಿಕಾರಿಗಳು ಖಚಿತ ಪಡಿಸಿದ್ದಾರೆ.ಪ್ರಾಧಿಕಾರದ ಪ್ರಭಾರ ಆಯುಕ್ತ ಕರೀಗೌಡ ಪ್ರಜಾವಾಣಿಯೊಂದಿಗೆ ಮಾತನಾಡಿ ಹೈಕೋರ್ಟ್ ನಿರ್ದೇಶನ ದಂತೆ ಸಮೀಕ್ಷಾ ಕಾರ್ಯಕ್ಕೆ ಎಲ್ಲ ವ್ಯವಸ್ಥೆಗಳನ್ನು ಮಾಡಲಾಗುವುದು ಈಗಾಗಲೆ ಸಿದ್ದಪಡಿಸಿರುವ ಅನಧಿಕೃತ ನಿರ್ಮಾಣಗಳ ಪಟ್ಟಿಯನ್ನು ತುಲನೆ ಮಾಡಿ ವಾಸ್ತವ ವರದಿಯನ್ನು ನಿಗದಿತ ಸಮಯದಲ್ಲಿ ನ್ಯಾಯಾಲಯಕ್ಕೆ ಸಲ್ಲಿಸಲು ಪ್ರಾಧಿಕಾರ ಎಲ್ಲ ಸಹಕಾರ ನೀಡಲಿದೆ ಎಂದರು.

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry