ಹಂಪ ನಾಗರಾಜಯ್ಯಗೆ ಅಹಿಂಸಾ ಪ್ರಶಸ್ತಿ

7

ಹಂಪ ನಾಗರಾಜಯ್ಯಗೆ ಅಹಿಂಸಾ ಪ್ರಶಸ್ತಿ

Published:
Updated:

ಬೆಂಗಳೂರು:  ನವದೆಹಲಿಯ ಅಹಿಂಸಾ ಇಂಟರ್‌ನ್ಯಾಷನಲ್ ಸಂಸ್ಥೆ ನೀಡುವ 2012ನೇ ಸಾಲಿನ `ಅಹಿಂಸಾ ಇಂಟರ್‌ನ್ಯಾಷನಲ್ ಪ್ರಶಸ್ತಿ'ಗೆ ಹಿರಿಯ ಸಾಹಿತಿ ಪ್ರೊ. ಹಂಪ ನಾಗರಾಜಯ್ಯ ಆಯ್ಕೆಯಾಗಿದ್ದಾರೆ.ಈ ಪ್ರಶಸ್ತಿಯು 31 ಸಾವಿರ ರೂಪಾಯಿ ನಗದು ಹಾಗೂ ಪ್ರಶಸ್ತಿಪತ್ರವನ್ನು ಒಳಗೊಂಡಿದೆ. ಭಾರತೀಯ ಸಾಹಿತ್ಯ, ಸಂಸ್ಕೃತಿ ಹಾಗೂ ವಾಸ್ತುಶಿಲ್ಪ ಕ್ಷೇತ್ರಕ್ಕೆ ಹಂಪನಾ ಅವರು ನೀಡಿರುವ ಕೊಡುಗೆಯನ್ನು ಪರಿಗಣಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.ಪ್ರಶಸ್ತಿ ಪ್ರದಾನ ಸಮಾರಂಭ ಇದೇ 30ರಂದು ನವದೆಹಲಿಯಲ್ಲಿ ನಡೆಯಲಿದೆ.ಮಂಗಳವಾರದ `ಪ್ರಜಾವಾಣಿ' ಸಂಚಿಕೆಯಲ್ಲಿ ಈ ಪ್ರಶಸ್ತಿಗೆ ಪ್ರೊ. ಕಮಲಾ ಹಂಪನಾ ಅವರು ಆಯ್ಕೆಯಾಗಿದ್ದಾರೆ ಎಂದು ತಪ್ಪಾಗಿ ಪ್ರಕಟವಾಗಿತ್ತು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry