ಹಕ್ಕು ಪತ್ರ ವಿತರಣೆಗೆ ಚಾಲನೆ

7

ಹಕ್ಕು ಪತ್ರ ವಿತರಣೆಗೆ ಚಾಲನೆ

Published:
Updated:

ಮಹದೇವಪುರ: `ಕ್ಷೇತ್ರದ ಎಲ್ಲ ಕೊಳೆಗೇರಿಯ ಬಡವರಿಗೆ ಹಕ್ಕುಪತ್ರಗಳನ್ನು ವಿತರಿಸುವ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು, ಪ್ರತಿಯೊಂದು ವಾರ್ಡ್‌ನಲ್ಲಿಯೂ ಹಂತ ಹಂತವಾಗಿ ಹಕ್ಕುಪತ್ರಗಳನ್ನು ವಿತರಿಸಲಾಗುವುದು~ ಎಂದು ಆರೋಗ್ಯ  ಹಾಗೂ ಕುಟುಂಬ ಕಲ್ಯಾಣ ಇಲಾಖೆ ಸಚಿವ ಅರವಿಂದ ಲಿಂಬಾವಳಿ ಭರವಸೆ ನೀಡಿದರು.ಕ್ಷೇತ್ರದ ಬಸವಣ್ಣನಗರದಲ್ಲಿ ಇತ್ತೀಚೆಗೆ ಕೊಳೆಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸಿ ಅವರು ಮಾತನಾಡಿದರು.ಅಧ್ಯಕ್ಷತೆ ವಹಿಸಿದ್ದ ಮಹದೇವಪುರ ಕ್ಷೇತ್ರ ಬಿಜೆಪಿ ಘಟಕದ ಅಧ್ಯಕ್ಷ ಪಿ.ಕೆ.ಜಯಚಂದ್ರ ರೆಡ್ಡಿ ಮಾತನಾಡಿ, `ಮಹದೇವಪುರ ಕ್ಷೇತ್ರದಲ್ಲಿ ಕೊಳೆಗೇರಿ ಅಭಿವೃದ್ಧಿ ಮಂಡಳಿ ಒಟ್ಟು 40 ಕೊಳಚೆ ಪ್ರದೇಶಗಳನ್ನು ಗುರುತಿಸಿದೆ. ಅವುಗಳ ಪೈಕಿ 13 ಕೊಳೆಗೇರಿಯ ಬಡವರಿಗೆ ಹಕ್ಕು ಪತ್ರಗಳನ್ನು ವಿತರಿಸಲಾಗಿದೆ~ ಎಂದರು.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry