ಹಗರಣದಲ್ಲಿ ಭಾಗಿಯಾಗಿಲ್ಲ

7

ಹಗರಣದಲ್ಲಿ ಭಾಗಿಯಾಗಿಲ್ಲ

Published:
Updated:

ಬೆಂಗಳೂರು:  `ವಿಶ್ವ ಭಾರತಿ ಕೋ ಆಪರೇಟಿವ್ ಬ್ಯಾಂಕಿನ ಹಗರಣದಲ್ಲಿ ನಾನು ಭಾಗಿಯಾಗಿಲ್ಲ. ಆದರೆ ವಿನಾ ಕಾರಣ ಹಗರಣದಲ್ಲಿ ನನ್ನ ಹೆಸರು ಪ್ರಸ್ತಾಪಿಸಿ ತೊಂದರೆ ನೀಡಲಾಗುತ್ತಿದೆ~  ಎಂದು ಸಂಸದ ಎಚ್.ಡಿ.ಕುಮಾರಸ್ವಾಮಿ ನೊಂದು ನುಡಿದರು.ಕರ್ನಾಟಕ ದಲಿತ ಸಂಘರ್ಷ ಸಮಿತಿ ನಗರದಲ್ಲಿ ಈಚೆಗೆ ಹಮ್ಮಿಕೊಂಡಿದ್ದ `ದಲಿತ ಪ್ರಾತಿನಿಧ್ಯ ಸಮಕಾಲೀನ ಸವಾಲುಗಳು ಮತ್ತು ಸಾಧ್ಯತೆಗಳು~ ಕುರಿತ ವಿಚಾರ ಸಂಕಿರಣದಲ್ಲಿ ಭಾಗವಹಿಸಿ ಮಾತನಾಡಿದರು.ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕಿ ಮೋಟಮ್ಮ, `ಕೊಪ್ಪಳ ವಿಧಾನಸಭೆಯ ಉಪ ಚುನಾವಣೆಯಲ್ಲಿ ಆಡಳಿತ ರೂಢ ಬಿಜೆಪಿಯು ಹಣ ಬಲದಿಂದ ಗೆಲುವು ಸಾಧಿಸಿದೆ ಎಂದು ಟೀಕಿಸಿದರು.ದಲಿತ ಸಂಘರ್ಷ ಸಮಿತಿ (ಭೀಮವಾದ) ರಾಜ್ಯ ಸಂಚಾಲಕ ಆರ್.ಮೋಹನ್‌ರಾಜ್, ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಡಾ.ಸಿ.ಎಸ್.ದ್ವಾರಕನಾಥ್, ಜಾನಪದ ಗಾಯಕ ಬಾನಂದೂರು ಕೆಂಪಯ್ಯ ಇತರರು ಉಪಸ್ಥಿತರಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry