ಹಗರಿಬೊಮ್ಮನಹಳ್ಳಿಯಲ್ಲಿ ಕಲಾ ಉತ್ಸವ 10ರಂದು

7

ಹಗರಿಬೊಮ್ಮನಹಳ್ಳಿಯಲ್ಲಿ ಕಲಾ ಉತ್ಸವ 10ರಂದು

Published:
Updated:

ಬಳ್ಳಾರಿ: ಮಕ್ಕಳ ದಿನಾಚರಣೆ ಅಂಗವಾಗಿ ಬಾಲಭವನದ ಆಶ್ರಯ ದಲ್ಲಿ ಅಕ್ಟೋಬರ್ 10ರ ಬೆಳಿಗ್ಗೆ 11 ಗಂಟೆಗೆ ಹಗರಿಬೊಮ್ಮನಹಳ್ಳಿಯಲ್ಲಿ ತಾಲ್ಲೂಕು ಮಟ್ಟದ ಮಕ್ಕಳ ಕಲಾ ಉತ್ಸವ ಹಾಗೂ ಕಲಾಶ್ರೀ ಪ್ರಶಸ್ತಿ ಶಿಬಿರ ಏರ್ಪಡಿಸಲಾಗಿದೆ ಎಂದು ಹಗರಿಬೊಮ್ಮನಹಳ್ಳಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ತಿಳಿಸಿದ್ದಾರೆ.

 

ಹಗರಿಬೊಮ್ಮನಹಳ್ಳಿಯ ಗುರು ಭವನದಲ್ಲಿ ನಡೆಯುವ ಕಲಾ ಉತ್ಸವ ದಲ್ಲಿ ಸೃಜನಾತ್ಮಕ ಕಲೆ (ಚಿತ್ರಕಲೆ, ಕರಕುಶಲ ಕಲೆ, ಜೇಡಿ ಮಣ್ಣಿನ ಕಲೆ ಮೂರರಲ್ಲೂ ಕಡ್ಡಾಯವಾಗಿ ಭಾಗವ ಹಿಸಬೇಕು), ಸೃಜನಾತ್ಮಕ ಬರವಣಿಗೆ (ಕಥೆ, ಕವನ, ಪ್ರಬಂಧ  ಮೂರರಲ್ಲೂ ಕಡ್ಡಾಯ ವಾಗಿ ಭಾಗವಹಿಸಬೇಕು), ಸೃಜನಾತ್ಮಕಪ್ರದರ್ಶನ ಕಲೆ (ಶಾಸ್ತ್ರೀಯ ನತ್ಯ, ಜಾನಪದ ನತ್ಯ, ಕರ್ನಾಟಕ ಹಾಗೂ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ, ವಾದ್ಯ ಸಂಗೀತ, ಯಕ್ಷಗಾನ, ಯಕ್ಷಿಣಿ ಪ್ರದರ್ಶನ, ಸುಗಮ ಸಂಗೀತ, ಏಕಪಾತ್ರಾಭಿನಯ, ಯೋಗ, ನೃತ್ಯ, ಮ್ಯೋಜಿಕ್ ಇತ್ಯಾದಿ ಯಾವುದಾದ ರೊಂದು ಕಲೆಯನ್ನು ಮಾತ್ರ ಪ್ರದರ್ಶಿಸಲು ಅವಕಾಶ ಇರುತ್ತದೆ), ವಿಜ್ಞಾನದಲ್ಲಿ ನೂತನ ಆವಿಷ್ಕಾರ (ವಿಜ್ಞಾನಕ್ಕೆ ಸಂಬಂಧಿಸಿದ ಒಂದು ವಿಷಯದ ಬಗ್ಗೆ ಮಾದರಿ ಪ್ರದರ್ಶನ ಹಾಗೂ ವಿವರಣೆ ಮತ್ತು ವಿಜ್ಞಾನ ಕ್ಷೇತ್ರಕ್ಕೆ ಸಂಬಂಧಿಸಿದಂತೆ ತೀರ್ಪುಗಾರರ ಇನ್ನಿತರ ಪ್ರಶ್ನೆಗಳಿಗೆ ಉತ್ತರ) ಕುರಿತ ನಾಲ್ಕು ಕ್ಷೇತ್ರಗಳಲ್ಲಿ ಸ್ಪರ್ಧೆ ನಡೆಯಲಿದೆ. ಸ್ಪರ್ಧೆಯಲ್ಲಿ 9 ವರ್ಷದಿಂದ 16 ವರ್ಷದೊಳಗಿನವರು ಭಾಗವಹಿಸ ಬಹುದಾಗಿದ್ದು, ಆಸಕ್ತರು ಜನನ ಪ್ರಮಾಣಪತ್ರ ಹಾಗೂ ಒಂದು ಭಾವಚಿತ್ರದೊಂದಿಗೆ ಹಾಜರಾಗಬೇಕು.ಹೆಚ್ಚಿನ ಮಾಹಿತಿಗಾಗಿ ಹಗರಿ ಬೊಮ್ಮನಹಳ್ಳಿ ಶಿಶು ಅಭಿವೃದ್ಧಿ ಕಚೇರಿ ಅಥವಾ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಅಥವಾ ದೂರವಾಣಿ ಸಂಖ್ಯೆ 08397-238156 ಸಂಪರ್ಕಿಸ ಬೇಕೆಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry