ಶನಿವಾರ, ಜನವರಿ 18, 2020
26 °C

ಹಜಾರೆ ನಿರಶನ 2ನೇ ದಿನಕ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಳೆಗಣಸಿದ್ದಿ (ಪಿಟಿಐ):  ಜನ­ಲೋಕಪಾಲ ಮಸೂದೆಯನ್ನು ಸಂಸತ್‌ನಲ್ಲಿ ಅಂಗೀಕರಿಸಬೇಕು ಎಂದು ಒತ್ತಾಯಸಿ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಅವರು ನಡೆಸುತ್ತಿರುವ ಅನಿರ್ದಿಷ್ಟಾವಧಿ  ಉಪವಾಸ ಸತ್ಯಾಗ್ರಹ ಎರಡನೇ  ದಿನ ಪೂರೈಸಿದೆ.ಸ್ವಗ್ರಾಮದ ಯಾದವಬಾಬಾ ದೇವಾಲಯದ ಬಳಿ ಚಳಿಯ ವಾತಾವರಣದ ನಡುವೆಯೂ 76 ವರ್ಷದ ಅಣ್ಣಾ ಹಜಾರೆ ಉಪವಾಸ ಸತ್ಯಾಗ್ರಹ ಮುಂದುವರಿಸಿದ್ದಾರೆ. ಹಜಾರೆ ಆರೋಗ್ಯ ಸ್ಥಿತಿಯನ್ನು ತಿಳಿಯಲು ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ.ಕೇಂದ್ರ ಸಚಿವ ವಿ.ನಾರಾಯಣ ಸ್ವಾಮಿ ಸರ್ಕಾರ ಲೋಕಪಾಲ ಮಸೂದೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ಈ ಅಧಿವೇಶನದಲ್ಲಿಯೇ ಮಂಡಿಸಲು ಅವಕಾಶ ನೀಡುವಂತೆ ರಾಜ್ಯಸಭಾ ಅಧ್ಯಕ್ಷರಿಗೆ ನೋಟಿಸ್‌ ನೀಡಲಾಗಿದೆ ಎಂದು ಮಂಗಳವಾರ ಹೇಳಿದ್ದರು.

ಪ್ರತಿಕ್ರಿಯಿಸಿ (+)