ಸೋಮವಾರ, ಮೇ 23, 2022
28 °C

ಹಟ್ಟಿಚಿನ್ನದ ಗಣಿ ಕಂಪೆನಿಯಿಂದ 7.2 ಕೋಟಿ ದೇಣಿಗೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಹಟ್ಟಿ ಚಿನ್ನದ ಗಣಿ ಕಂಪೆನಿಯು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಮಂಗಳವಾರ ಒಟ್ಟು 7.2 ಕೋಟಿ ರೂಪಾಯಿಗಳ ದೇಣಿಗೆ ನೀಡಿದೆ.5 ಕೋಟಿ ರೂಪಾಯಿ ಮತ್ತು 2.20 ಕೋಟಿ ರೂಪಾಯಿಗಳ ಚೆಕ್ ಅನ್ನು ಹಟ್ಟಿ ಚಿನ್ನದ ಗಣಿ ಕಂಪೆನಿಯ ಅಧ್ಯಕ್ಷ ಎಸ್.ವಿ. ರಾಮಚಂದ್ರ ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ವಿಧಾನ ಸೌಧದಲ್ಲಿ ಹಸ್ತಾಂತರಿಸಿದರು.2010ರ ಆಗಸ್ಟ್ ತಿಂಗಳಿನಲ್ಲಿ ಕಂಪೆನಿ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ರೂ 5 ಕೋಟಿ ನೀಡಿತ್ತು. ಇದರಿಂದ  2010-11ನೆಯ ಆರ್ಥಿಕ ವರ್ಷದಲ್ಲಿ ಕಂಪೆನಿ ಒಟ್ಟು 12.2 ಕೋಟಿ ರೂಪಾಯಿಗಳನ್ನು ನೀಡಿದಂತಾಗಿದೆ. ಕಂಪೆನಿಯ ಆಡಳಿತ ನಿರ್ದೇಶಕ ಡಾ.ವಿ. ಚಂದ್ರಶೇಖರ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.