ಶುಕ್ರವಾರ, ನವೆಂಬರ್ 22, 2019
23 °C

`ಹಣಕ್ಕಾಗಿ ಮತ ಮಾರಿಕೊಳ್ಳಬೇಡಿ'

Published:
Updated:

ಹಿರಿಯೂರು: ಚುನಾವಣೆಯಲ್ಲಿ ಮತ ಚಲಾಯಿಸಲು ಹಣದ ಆಮಿಷಕ್ಕೆ ಒಳಗಾಗದೆ, ಜನಸಾಮಾನ್ಯರ ಕಷ್ಟಗಳಿಗೆ ಸ್ಪಂದಿಸುವ ವ್ಯಕ್ತಿಗೆ ಹಾಗೂ ಪಕ್ಷಕ್ಕೆ ಮತ ಚಲಾಯಿಸಿ ಎಂದು ಬಿಜೆಪಿಯ ರಾಜ್ಯ ಸಂಘಟನಾ ಕಾರ್ಯದರ್ಶಿ ಸಂತೋಷ್‌ಜಿ ಕರೆ ನೀಡಿದರು.ತಾಲ್ಲೂಕಿನ ವಾಣಿ ವಿಲಾಸಪುರ ಗ್ರಾಮದಲ್ಲಿ ಮಂಗಳವಾರ ಬಿಜೆಪಿ ವತಿಯಿಂದ ಹಮ್ಮಿಕೊಂಡಿದ್ದ ಚುನಾವಣಾ ಪ್ರಚಾರ ಸಭೆ ಉದ್ದೇಶಿಸಿ ಅವರು ಮಾತನಾಡಿದರು.ವಾಣಿವಿಲಾಸಪುರ ಕ್ಷೇತ್ರದಲ್ಲಿ ಆಗಬೇಕಾದ ಕೆಲಸಗಳು ಸಾಕಷ್ಟಿವೆ.  ಈ ನಿಟ್ಟಿನಲ್ಲಿ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುವ ಅಗತ್ಯವಿದೆ ಎಂದರು.

ಪಕ್ಷದ ಅಭ್ಯರ್ಥಿ ಸಿದ್ದೇಶ್ ಯಾದವ್ ಮಾತನಾಡಿ, ಐದಾರು ದಶಕಗಳಿಂದ ನೆನೆಗುದಿಗೆ ಬಿದ್ದಿದ್ದ ಭದ್ರಾ ಮೇಲ್ದಂಡೆ ಯೋಜನೆಗೆ ಹಣ ಬಿಡುಗಡೆ ಮಾಡುವ ಮೂಲಕ ಕಾಮಗಾರಿ ಆರಂಭಿಸಿದ್ದು ಬಿಜೆಪಿ ಸರ್ಕಾರ.ಮತ್ತೊಮ್ಮೆ ಅಧಿಕಾರಕ್ಕೆ ಬಂದರೆ ನಿಗದಿತ ಅವಧಿಯೊಳಗೆ ಭದ್ರಾ ಮೇಲ್ದಂಡೆ ಯೋಜನೆ ಪೂರ್ಣಗೊಳಿಸುತ್ತೇವೆ ಎಂದು ಭರವಸೆ ನೀಡಿದರು.

ಎಂ.ವಿ. ಹರ್ಷ, ಬಿ.ಆರ್. ರಂಗಸ್ವಾಮಿ, ಜಿ. ಸೋಮಣ್ಣ, ಗೋಪಾಲ್ ಹಾಜರಿದ್ದರು.

ಪ್ರತಿಕ್ರಿಯಿಸಿ (+)