ಶನಿವಾರ, ಏಪ್ರಿಲ್ 17, 2021
22 °C

ಹಣ ದುರುಪಯೋಗ ಸಾಬೀತು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೊನ್ನಾಳಿ: ಪಟ್ಟಣದಲ್ಲಿ ಕಳಪೆ ಸಿಮೆಂಟ್ ರಸ್ತೆಗಳನ್ನು ನಿರ್ಮಿಸುವ ಮೂಲಕ ಸರ್ಕಾರದ ಬೊಕ್ಕಸಕ್ಕೆ ಲಕ್ಷಾಂತರ ರೂ.ಗಳ ನಷ್ಟವನ್ನುಂಟು ಮಾಡಿದ ಅಧಿಕಾರಿಗಳ ಮೇಲೆ ಶಿಸ್ತುಕ್ರಮ ಜರುಗಿಸಲು ಲೋಕಾಯುಕ್ತ ತನಿಖಾ ವರದಿ ಸಲ್ಲಿಸಿದ್ದು, ಈ ವರದಿಯನ್ನು ಜಯ ಕರ್ನಾಟಕ ಸಂಘಟನೆ ಮತ್ತು ಯುವಶಕ್ತಿ ಒಕ್ಕೂಟಗಳು ಸ್ವಾಗತಿಸುತ್ತವೆ ಎಂದು ಜಯ ಕರ್ನಾಟಕ ಸಂಘಟನೆ ಅಧ್ಯಕ್ಷ ಸುರೇಶ್ ಹೇಳಿದರು.2007-08ರಲ್ಲಿ ರೂ 1,25,32,000 ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಿಸಲಾಗಿತ್ತು. ಪಟ್ಟಣ ಪಂಚಾಯ್ತಿ ಮುಖ್ಯಾಧಿಕಾರಿ, ಎಂಜಿನಿಯರ್, ಗುತ್ತಿಗೆದಾರರು, ಜನಪ್ರತಿನಿಧಿಗಳು ಶಾಮೀಲಾಗಿ ಕಳಪೆ ಕಾಮಗಾರಿ ನಿರ್ವಹಿಸಿದ್ದರು. ಈ ಅವ್ಯವಹಾರದ ಬಗ್ಗೆ 2008ರ ಆ. 20ರಂದು ಪಟ್ಟಣದ ವಕೀಲರೊಬ್ಬರು ಲೋಕಾಯುಕ್ತರಿಗೆ ಅಂಚೆ ಮೂಲಕ ದೂರು ನೀಡಿದ್ದರು ಎಂದು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಸ್ಮರಿಸಿದರು.ಲೋಕಾಯುಕ್ತ ತನಿಖೆಯಿಂದ ಲಕ್ಷಾಂತರ ರೂ.ಗಳ ಭ್ರಷ್ಟಾಚಾರ ಬಯಲಾಗಿದ್ದು, ನ. 8ರಂದು ಪಟ್ಟಣದ ಜಯಚಾಮರಾಜ ವೃತ್ತದಲ್ಲಿ ಯುವಶಕ್ತಿ ಒಕ್ಕೂಟ ಹಾಗೂ ಜಯ ಕರ್ನಾಟಕ ಸಂಘಟನೆ ವತಿಯಿಂದ ವಿಜಯೋತ್ಸವ ಆಚರಿಸಲಾಗುವುದು. ತಪ್ಪಿತಸ್ಥರ ಮೇಲೆ ತಕ್ಷಣ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲಾಗುವುದು ಎಂದು ಅವರು ಹೇಳಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.