ಹಣ ದುರ್ಬಳಕೆ: ಮಹತ್ವದ ಸುಳಿವು

7

ಹಣ ದುರ್ಬಳಕೆ: ಮಹತ್ವದ ಸುಳಿವು

Published:
Updated:

ರಾಂಚಿ (ಪಿಟಿಐ): ಜಾರ್ಖಂಡ್‌ನಿಂದ ರಾಜ್ಯಸಭೆಯ ಎರಡು ಸ್ಥಾನಗಳಿಗೆ ಇತ್ತೀಚೆಗೆ ನಡೆದ ಚುನಾವಣೆ ವೇಳೆ ವ್ಯಾಪಕವಾಗಿ ನಡೆದಿದೆ ಎನ್ನಲಾದ ಹಣ ದುರ್ಬಳಕೆ ಬಗ್ಗೆ ಅನೇಕ ಮಹತ್ವದ ಸುಳಿವುಗಳು ಲಭ್ಯವಾಗಿದ್ದು, ಆರು ತಿಂಗಳಲ್ಲಿ ತನಿಖೆ ಪೂರ್ಣಗೊಳಿಸುವುದಾಗಿ ಸಿಬಿಐ ಹೇಳಿದೆ.ಚುನಾವಣೆಗೂ ಮುನ್ನ ವಶಪಡಿಸಿಕೊಳ್ಳಲಾದ ಹಣ, ಕಾರು, ಮತಪೆಟ್ಟಿಗೆ ಹಾಗೂ ಇನ್ನಿತರ ವಸ್ತುಗಳಿಂದ ಈ ಸುಳಿವುಗಳು ದೊರೆತಿವೆ. ತನಿಖೆ ಇನ್ನೂ ಪ್ರಗತಿಯಲ್ಲಿದ್ದು, ವಿವರ ಬಹಿರಂಗ ಪಡಿಸುವುದು ಸಾಧ್ಯವಿಲ್ಲ ಎಂದು ಸಿಬಿಐನ ಹಿರಿಯ ಅಧಿಕಾರಿ ತಿಳಿಸಿದ್ದಾರೆ.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry