ಹಣ ವರ್ಗಾವಣೆ ಯೋಜನೆ ತಡೆಗೆ ಮನವಿ

7

ಹಣ ವರ್ಗಾವಣೆ ಯೋಜನೆ ತಡೆಗೆ ಮನವಿ

Published:
Updated:

ನವದೆಹಲಿ (ಐಎಎನ್‌ಎಸ್): ಗುಜರಾತ್ ಮತ್ತು ಹಿಮಾಚಲ ಪ್ರದೇಶದಲ್ಲಿನ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಸರ್ಕಾರ, ನೇರ ಹಣ ವರ್ಗಾವಣೆಯ ಯೋಜನೆಯನ್ನು ತಡೆಯಬಹುದಾಗಿದೆ ಎಂದು ಚುನಾವಣಾ ಆಯೋಗ ಅಭಿಪ್ರಾಯಪಟ್ಟಿದೆ.ಚುನಾವಣೆಯ ಸಮಯದಲ್ಲಿಯೇ ಯೋಜನೆಯನ್ನು ಘೋಷಿಸಿದ ಸರ್ಕಾರದ ಕ್ರಮದ ಕುರಿತು ಕಳವಳ ವ್ಯಕ್ತಪಡಿಸಿದ ಆಯೋಗ, ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ಗುಜರಾತ್ ಮತ್ತು ಹಿಮಾಚಲ ಪ್ರದೇಶದಲ್ಲಿ ಯೋಜನೆ ಅನುಷ್ಠಾನವನ್ನು ತಡೆಹಿಡಿಯಬೇಕು ಎಂದು ಕೋರಿದೆ.ಚುನಾವಣೆಯ ಸಂದರ್ಭದಲ್ಲಿ ಯೋಜನೆ ಜಾರಿಯಾದಲ್ಲಿ ಅದು ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆಯಾಗುವುದರಿಂದ ಅದನ್ನು ತಡೆಹಿಡಿಯಬೇಕು ಎಂದು ಸಂಪುಟ ಕಾರ್ಯದರ್ಶಿ ಅಜಿತ್ ಸೇಥ್ ಅವರಿಗೆ ಬರೆದ ಪತ್ರದಲ್ಲಿ ಆಯೋಗ ಮನವಿ ಮಾಡಿಕೊಂಡಿದೆ. 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry