ಬುಧವಾರ, ಜೂನ್ 16, 2021
21 °C

ಹತ್ತಿ ರಫ್ತು ನಿಷೇಧ ರದ್ದು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ(ಪಿಟಿಐ): ಹತ್ತಿ ರಫ್ತು ನಿಷೇಧ ನಿರ್ಧಾರವನ್ನು ವಾಪಸ್ ಪಡೆಯಲಾಗುತ್ತದೆ ಎಂದು ವಾಣಿಜ್ಯ ಸಚಿವ ಆನಂದ್ ಶರ್ಮಾ ಅವರು ಭಾನುವಾರ ಇಲ್ಲಿ ತಿಳಿಸಿದ್ದಾರೆ.ಹತ್ತಿ ರಫ್ತು ನಿಷೇಧಿಸಲು ಕಳೆದ ವಾರ ನಿರ್ಧರಿಸಲಾಗಿತ್ತು. ಆದರೆ ಕೃಷಿಕರು, ಉದ್ಯಮಿಗಳು ಮತ್ತು ವ್ಯಾಪಾರಸ್ಥರ ಹಿತವನ್ನು ಗಮನದಲ್ಲಿ ಇಟ್ಟುಕೊಂಡು ಸಚಿವರ ತಂಡವು ಈ ನಿರ್ಧಾರವನ್ನು ವಾಪಸ್ ಪಡೆಯಲು ತಿರ್ಮಾನಿಸಿದೆ ಎಂದು ಸಚಿವರು ತಿಳಿಸಿದ್ದಾರೆ.ಈ ಸಂಬಂಧ ಅಧಿಕೃತ ಆದೇಶವನ್ನು ಸೋಮವಾರ ಹೊರಡಿಸಲಾಗುವುದು ಎಂದು ಶರ್ಮಾ ತಿಳಿಸಿದ್ದಾರೆ.

ಪ್ರಧಾನಿ ಮನಮೋಹನ್ ಸಿಂಗ್ ಅವರ ಆದೇಶದ ಹಿನ್ನೆಲೆಯಲ್ಲಿ ಹಣಕಾಸು ಸಚಿವ ಪ್ರಣವ್ ಮುಖರ್ಜಿ ನೇತೃತ್ವದ ಸಚಿವರ ತಂಡವು ಹತ್ತಿ ರಫ್ತು ಮೇಲಿನ ನಿಷೇಧವನ್ನು ತೆಗೆದುಹಾಕಲು ತೀರ್ಮಾನ ತೆಗೆದುಕೊಂಡಿತು.ಮಾರ್ಚ್ 5ರಂದು ವಾಣಿಜ್ಯ ಸಚಿವಾಲಯವು ಹತ್ತಿ ರಫ್ತು ನಿಷೇಧಿಸಿ ಆದೇಶ ಹೊರಡಿಸಿತ್ತು. ಈ ಆದೇಶಕ್ಕೆ ಅನೇಕ ರಾಜ್ಯಗಳು ವಿರೋಧ ವ್ಯಕ್ತಪಡಿಸಿದ್ದವು ಹಾಗೂ ಸ್ವತಃ ಕೃಷಿ ಸಚಿವ ಶರದ್ ಪವಾರ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು. ವಾಣಿಜ್ಯ ಮತ್ತು ಜವಳಿ ಸಚಿವಾಲಯವು ಹತ್ತಿ ರಫ್ತು ನಿಷೇಧಿಸಿ ಆದೇಶ ಹೊರಡಿಸುವಾಗ ತಮ್ಮನ್ನು ನಿರ್ಲಕ್ಷ್ಯಿಸಿದೆ ಎಂದು ಪವಾರ್ ಆಕ್ಷೇಪ ವ್ಯಕ್ತಪಡಿಸಿದ್ದರು. ಹೆಚ್ಚು ಹತ್ತಿ ಬೆಳೆಯುವ ಮಹಾರಾಷ್ಟ್ರ, ಗುಜರಾತ್ ಆಕ್ಷೇಪ ವ್ಯಕ್ತಪಡಿಸಿದ್ದವು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.