ಮಂಗಳವಾರ, ಮೇ 17, 2022
25 °C

ಹತ್ತು ಸಾವಿರ ಸಸಿ ನೆಡುವ ಯೋಜನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಪೀಣ್ಯ ದಾಸರಹಳ್ಳಿ: ಜಯ ಕರ್ನಾಟಕ ಸಂಘಟನೆ ವತಿಯಿಂದ ರಾಜ್ಯದಲ್ಲಿ ಹತ್ತು ಸಾವಿರ ಗಿಡಗಳನ್ನು ನೆಡಲಾ ಗುವುದು ಎಂದು ಸಂಘಟನೆಯ ರಾಜ್ಯ ಅಧ್ಯಕ್ಷ ಜಗದೀಶ್ ಹೇಳಿದರು.ಹೆಸರಘಟ್ಟ ರಸ್ತೆಯ ಚಿಕ್ಕಬಾಣಾವರದ ರಾಘವೇಂದ್ರ ಕಾಲೊನಿಯಲ್ಲಿ ಪರಿಸರ ದಿನಾಚರಣೆ ಅಂಗವಾಗಿ ಸಂಘಟನೆಯಿಂದ ಹಮ್ಮಿಕೊಂಡಿದ್ದ ಗಿಡ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.`ಗಿಡ ನೆಟ್ಟ ಸ್ಥಳದಲ್ಲಿ ಜಯ ಕರ್ನಾಟಕ ಕಾರ್ಯಕರ್ತರೇ ಸಸಿ ಬೆಳೆಸುವ ಹೊಣೆಗಾರಿಕೆಯನ್ನು ತೆಗೆದುಕೊಳ್ಳುತ್ತಾರೆ. ಗ್ರಾಮ ಪಂಚಾಯಿತಿ ಮಟ್ಟದ್ಲ್ಲಲೂ ಗುಂಡು ತೋಪುಗಳನ್ನು ಬೆಳೆಸಲು ಯೋಜಿಸಲಾಗಿದೆ~ ಎಂದು ತಿಳಿಸಿದರು. ರಾಜ್ಯ ಸಂಘಟನಾ ಕಾರ್ಯದರ್ಶಿ ಶೆ.ಬೋ.ರಾಧಾಕೃಷ್ಣ, ಮುಖಂಡರಾದ ಪ್ರಕಾಶ್, ಗಂಗಾಧರ್, ರಾಮಕೃಷ್ಣ, ಪ್ರಕಾಶ್, ಬಸವರಾಜ್, ನಿರಂಜನ್ ಇತರರು ಹಾಜರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.