ಹತ್ಯೆಯಾದ ಬಿಬಿಎಂಪಿ ಸದಸ್ಯ ನಟರಾಜ್ ಅಂತ್ಯಕ್ರಿಯೆ

7

ಹತ್ಯೆಯಾದ ಬಿಬಿಎಂಪಿ ಸದಸ್ಯ ನಟರಾಜ್ ಅಂತ್ಯಕ್ರಿಯೆ

Published:
Updated:

ಬೆಂಗಳೂರು: ದುಷ್ಕರ್ಮಿಗಳಿಂದ ಕೊಲೆಗೀಡಾದ ಬಿಬಿಎಂಪಿ ಸದಸ್ಯ ಎಸ್.ನಟರಾಜ್ ಅವರ ಅಂತ್ಯಸಂಸ್ಕಾರ ನಗರದ ಹರಿಶ್ಚಂದ್ರಘಾಟ್ ವಿದ್ಯುತ್ ಚಿತಾಗಾರದಲ್ಲಿ ಭಾನುವಾರ ಮಧ್ಯಾಹ್ನ ನಡೆಯಿತು.ಇದಕ್ಕೂ ಮೊದಲು ಅವರ ಪಾರ್ಥಿವ ಶರೀರವನ್ನು ಕುಮಾರಪಾರ್ಕ್‌ನ ಅಪ್ಪರ್ ಪೈಪ್‌ಲೈನ್ ರಸ್ತೆಯಲ್ಲಿರುವ ಅವರ ನಿವಾಸದಿಂದ ಹರಿಶ್ಚಂದ್ರಘಾಟ್‌ವರೆಗೆ ಮೆರವಣಿಗೆಯಲ್ಲಿ ಕೊಂಡೊಯ್ಯಲಾಯಿತು. ಕಾಂಗ್ರೆಸ್ ಶಾಸಕರಾದ ದಿನೇಶ್ ಗುಂಡೂರಾವ್, ನೆ.ಲ.ನರೇಂದ್ರ ಬಾಬು,  ಬಿಬಿಎಂಪಿ ಸದಸ್ಯರು ಹಾಗೂ ಬೆಂಬಲಿಗರು ಅಂತ್ಯಸಂಸ್ಕಾರದಲ್ಲಿ ಪಾಲ್ಗೊಂಡಿದ್ದರು.ಸುದ್ದಿಗಾರರೊಂದಿಗೆ ಮಾತನಾಡಿದ ನಟರಾಜ್ ಅವರ ತಂದೆ ಸುಂದರಂ, `ಮಗನೇ ತೀರಿಕೊಂಡ ಮೇಲೆ ಯಾರಿಗೆ ಶಿಕ್ಷೆ ಕೊಟ್ಟು ಏನು ಪ್ರಯೋಜನ~ ಎಂದು ಹತಾಶರಾಗಿ ನುಡಿದರು. `ಶಾಸಕರು, ಪಾಲಿಕೆ ಸದಸ್ಯರಂತಹ ಜನಪ್ರತಿನಿಧಿಗಳಿಗೆ ಇನ್ನಾದರೂ ಸೂಕ್ತ ಭದ್ರತೆ ಕಲ್ಪಿಸಬೇಕು~ ಎಂದು ಸರ್ಕಾರಕ್ಕೆ ಮನವಿ ಮಾಡಿದರು.ಇದಕ್ಕೂ ಮುನ್ನ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಬಿ.ಕೆ.ಹರಿಪ್ರಸಾದ್, ನಟರಾಜ್ ಅವರ ನಿವಾಸಕ್ಕೆ ಭೇಟಿ ನೀಡಿ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು.ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಹರಿಪ್ರಸಾದ್, `ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದ ಮೇಲೆ ಬೆಂಗಳೂರು ಕೊಲೆ ನಗರವಾಗಿದೆ. ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಗೃಹ ಇಲಾಖೆ ಸಂಪೂರ್ಣ ವಿಫಲವಾಗಿದೆ~ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry