ಗುರುವಾರ , ಏಪ್ರಿಲ್ 15, 2021
22 °C

ಹತ್ಯೆ ಖಂಡಿಸಿ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಪೀಣ್ಯ ದಾಸರಹಳ್ಳಿ:  ರಿಯಲ್ ಎಸ್ಟೇಟ್ ಉದ್ಯಮಿ ಕೋಡಿಪಾಳ್ಯ ಬಿ.ನಂಜುಂಡಪ್ಪ ಅವರ ಹತ್ಯೆಯನ್ನು ಖಂಡಿಸಿ ಸ್ಥಳೀಯರು ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಕೆಂಗೇರಿ ಬಳಿಯ ಬೆಂಗಳೂರು ಮೈಸೂರು ರಸ್ತೆ ತಡೆದು ಸೋಮವಾರ ಪ್ರತಿಭಟನೆ ನಡೆಸಿದರು.ಎಲ್ಲಾ ಪಕ್ಷದ ಮುಖಂಡರು ಪಕ್ಷಾತೀತವಾಗಿ ಪ್ರತಿಭಟನೆಯಲ್ಲಿ ಭಾಗವಹಿಸಿ ಹತ್ಯೆಯನ್ನು ಖಂಡಿಸಿದರು. ಕೆಂಗೇರಿಯ ಮುಖ್ಯ ರಸ್ತೆಯಿಂದ ಕೋಡಿಪಾಳ್ಯದವರೆಗೆ ಮೌನ ಮೆರವಣಿಗೆ ನಡೆಸಿದರು.ಹತ್ಯೆ ಮಾಡಿದ ವ್ಯಕ್ತಿಯನ್ನು ತಕ್ಷಣ ಬಂಧಿಸಬೇಕು. ನೊಂದ ಕುಟುಂಬದವರಿಗೆ ನ್ಯಾಯ ದೊರಕಿಸಿಕೊಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.ನಂಜುಂಡಪ್ಪ ಅವರ ಶವವನ್ನು ಸಾಗಿಸುತ್ತಿದ್ದ ವಾಹನದ ಮುಂದೆ ಪ್ರತಿಭಟನೆಯನ್ನು ನಿಲ್ಲಿಸುವಂತೆ ಪೋಲಿಸರು ಮನವಿ ಮಾಡಿದರು. ಆ ಸಂದರ್ಭದಲ್ಲಿ ನಂಜುಂಡಪ್ಪನ ಅಭಿಮಾನಿಗಳಿಗೂ ಪೋಲಿಸರಿಗೂ ಮಾತಿನ ಚಕಮಕಿ ನಡೆಯಿತು. ಆರೋಪಿಗಳನ್ನು ತಕ್ಷಣ ಬಂಧಿಸುವುದಾಗಿ ಹೇಳಿದ ಮೇಲೆ ಪ್ರತಿಭಟನೆಯನ್ನು ನಿಲ್ಲಿಸಲಾಯಿತು.ಕರ್ನಾಟಕ ರಾಜ್ಯ ವಸತಿ ಸಹಕಾರ ಮಹಾಮಂಡಲದ ಅಧ್ಯಕ್ಷ ಎಸ್.ಟಿ.ಸೋಮಶೇಖರ್, ಯಶವಂತಪುರ ಕ್ಷೇತ್ರದ ಜೆಡಿಎಸ್ ಅಧ್ಯಕ್ಷ ಪಂಚಲಿಂಗಯ್ಯ, ಕಂಠೀರವ ಸ್ಟುಡಿಯೊ ಅಧ್ಯಕ್ಷ ಎಂ.ರುದ್ರೇಶ್, ಕೆಂಗೇರಿ ಪುರಸಭೆ ಮಾಜಿ ಅಧ್ಯಕ್ಷ ಸತ್ಯನಾರಾಯಣ, ಮುಖಂಡರುಗಳಾದ ನಾಗರಾಜು, ಗಿರಿಯಪ್ಪ, ಜನಾರ್ದನ್, ಶೈಲೇಶ್, ಮಂಜುನಾಥ್ ಇತರರು ಹಾಜರಿದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.