ಹದಗೆಟ್ಟ ಯಾದಾಪುರ ರಸ್ತೆ: ಸಂಚಾರ ಬಲು ಸಂಕಷ್ಟ

7

ಹದಗೆಟ್ಟ ಯಾದಾಪುರ ರಸ್ತೆ: ಸಂಚಾರ ಬಲು ಸಂಕಷ್ಟ

Published:
Updated:

ಅರಸೀಕೆರೆ: ತಾಲ್ಲೂಕಿನ ಮುರುಂಡಿ ಗ್ರಾಮ ಪಂಚಾಯಿತಿ ಆಡಳಿತ ನಿರ್ಲಕ್ಷ್ಯದಿಂದಾಗಿ ಸಂಕೊಂಡನಹಳ್ಳಿ ಗ್ರಾಮದಿಂದ ಯಾದಾಪುರ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಗುಂಡಿಗಳಿಂದ ಕೂಡಿದ್ದು ಸಂಚಾರಕ್ಕೆ ಹರಸಾಹಸ ಪಡಬೇಕಾಗಿದೆ.ಕಳೆದ ಒಂದ ವಾರದಿಂದ ಬೀಳುತ್ತಿರುವ ಮಳೆಯಿಂದಾಗಿ ರಸ್ತೆ ಸಂಪೂರ್ಣವಾಗಿ ನೀರಿನಿಂದ ಅವೃತ್ತವಾಗಿದ್ದು, ಪಾದಚಾರಿಗಳು ಹಾಗೂ ದ್ವಿಚಕ್ರ ಸವಾರರು ಸಂಚಾರಕ್ಕೆ ಕಷ್ಟಪಡಬೇಕಾಗಿದೆ.ಯಾದಾಪುರ ಜೇನುಕಲ್ ಸಿದ್ದೇಶ್ವರ ಸ್ವಾಮಿ ದೇವಾಲಯಕ್ಕೆ ತೆರಳುವ ಭಕ್ತರ ಸಂಖ್ಯೆ ಹೆಚ್ಚಿರುವುದರಿಂದ ತಕ್ಷಣ ಈ ರಸ್ತೆಯನ್ನು ದುರಸ್ತಿಪಡಿಸಬೇಕು. ಇಲ್ಲದಿದ್ದರೆ ತಾಲ್ಲೂಕು ಆಡಳಿತ ಕಚೇರಿ ಮುಂದೆ ಪ್ರತಿಭಟನೆ ನಡೆಸುವುದಾಗಿ ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry