ಶನಿವಾರ, ಜುಲೈ 31, 2021
27 °C

ಹದಿವಯಸ್ಸು: ಎಚ್ಚರಿಕೆ ಅಗತ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೋಲಾರ: ಅತ್ಯಂತ ಸೂಕ್ಷ್ಮ ಘಟ್ಟವಾದ ಹದಿಹರೆಯದಲ್ಲಿ ಮಕ್ಕಳು ದಾರಿ ತಪ್ಪದಂತೆ, ಕೀಳರಿಮೆ ಪಡದಂತೆ ಪೋಷಕರು ಮತ್ತು ಶಿಕ್ಷಕರು ಎಚ್ಚರಿಕೆ ವಹಿಸಿ ಮಾರ್ಗದರ್ಶನ ನೀಡಬೇಕು ಎಂದು ನಗರದ ಅಂತರಗಂಗಾ ಬುದ್ಧಿಮಾಂದ್ಯ ಮಕ್ಕಳ ವಸತಿ ಶಾಲೆ ಕಾರ್ಯದರ್ಶಿ ಕೆ.ಎಸ್.ಶಂಕರ್ ಹೇಳಿದರು.

ಶಾಲೆಯಲ್ಲಿ ಬೆಂಗಳೂರು ವಿಶ್ವ ವಿದ್ಯಾಲಯ ಸ್ನಾತಕೋತ್ತರ ಕೇಂದ್ರದ ಸಮಾಜ ಕಾರ್ಯ ವಿಭಾಗ ಮತ್ತು ಸೌಖ್ಯ ಸಮೃದ್ಧಿ ಸಂಸ್ಥೆಯು ಬಾಪೂಜಿ ಪ್ರೌಢಶಾಲೆ ವಿದ್ಯಾರ್ಥಿಗಳಿಗಾಗಿ ಏರ್ಪಡಿಸಿದ್ದ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸಮಾಜದಲ್ಲಿ ಎದುರಾಗುವ ಕಷ್ಟಗಳನ್ನು ನಿಭಾಯಿಸಿ ಬದುಕುವ ಹಾಗೂ ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳುವ ಸಾಮರ್ಥ್ಯವನ್ನು ಹದಿಹರೆಯದ ಹಂತದಿಂದಲೇ ರೂಢಿಸಬೇಕು ಎಂದರು.

ಸಮಾಜದಲ್ಲಿ ಹೆಣ್ಣುಮಕ್ಕಳ ಮೇಲೆ ನಡೆಯುತ್ತಿರುವ ದೌರ್ಜನ್ಯ, ಅತ್ಯಾಚಾರ ತಡೆಯಲು ಎಲ್ಲರೂ ಮುಂದಾಗಬೇಕು. ಸಾಂಸ್ಕೃತಿಕ, ಕ್ರೀಡಾ ಕಾರ್ಯಕ್ರಮಗಳಲ್ಲಿ ಭಾಗವಹಿಸಿದಾಗ ವಿದ್ಯಾರ್ಥಿಗಳಿಗೆ ತಮ್ಮ ಪ್ರತಿಭೆ ಸ್ಪಷ್ಟವಾಗುತ್ತದೆ. ಉತ್ತಮ ಆರೋಗ್ಯ ಬೇಕೆಂದರೆ ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸಬೇಕು ಎಂದರು.

ಸೌಖ್ಯ ಸಮದ್ಧಿ ಸಂಸ್ಥೆ ಯೋಜನಾ ವ್ಯವಸ್ಥಾಪಕ ರುದ್ರೇಶ್, ಜಿಲ್ಲಾ ಸಂಯೋಜಕ ಜಿ.ಎಸ್.ವೆಂಕಟೇಶ್, ಸಮಾಜ ಕಾರ್ಯ ವಿಭಾಗದ ವಿದ್ಯಾರ್ಥಿಗಳಾದ ನಾಗೇಶ್, ಆರ್.ಎ.ಸರಸ್ವತಿ, ಎನ್. ಲಕ್ಷ್ಮೀಪತಿ ಹಾಗೂ ಡಿ.ವಿ.ಸತೀಶ್ ಉಪಸ್ಥಿತರಿದ್ದರು.

ಆರ್‌ಪಿಐಗೆ ನೇಮಕ

ಕೋಲಾರ: ಭಾರತೀಯ ರಿಪಬ್ಲಿಕನ್ ಪಕ್ಷದ ರಾಜ್ಯ ಉಪಾಧ್ಯಕ್ಷರನ್ನಾಗಿ ಸಿ.ರಾಮಕೃಷ್ಣಯ್ಯ ಅವರನ್ನು ನೇಮಕ ಮಾಡಲಾಗಿದೆ ಎಂದು ರಾಜ್ಯ ಘಟಕದ ಅಧ್ಯಕ್ಷ ಎಂ.ವೆಂಕಟಸ್ವಾಮಿ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.