ಹನುಮಸಾಗರ: ಸಮೀಪದ ಬೀಳಗಿ ಗ್ರಾಮದ ಅನ್ನದಾನೇಶ್ವರ ಮಠದಲ್ಲಿ ಹಮ್ಮಿಕೊಳ್ಳಲಾಗಿದ್ದ ಮೂರು ದಿನಗಳ ಯುವ ಮುಂದಾಳತ್ವ ಹಾಗೂ ಸಮುದಾಯ ಅಭಿವೃದ್ಧಿ ತರಬೇತಿ ಶಿಬಿರ ಈಚೆಗೆ ಮುಕ್ತಾಯವಾಯಿತು. ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಅಂದಪ್ಪ ಹೊಟ್ಟಿ ಕಾರ್ಯಕ್ರಮ ಕುರಿತು ಮಾತನಾಡಿ, ಸಂಘ ಸಂಸ್ಥೆಗಳು, ಗ್ರಾಮೀಣ ಜನರಿಗೆ ಉಪಯುಕ್ತ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರ ಮೂಲಕ ಯುವ ಶಕ್ತಿಗೆ ಚೈತನ್ಯ ತುಂಬಬೇಕು ಎಂದು ಹೇಳಿದರು.

ನೆಹರು ಯುವ ಕೇಂದ್ರದ ತಾಲ್ಲೂಕು ಸಂಚಾಲಕ ಚನ್ನಪ್ಪ ಭಾವಿಮನಿ ಗ್ರಾಮೀಣ ಪ್ರದೇಶದಲ್ಲಿ ಯುವಕರು ಹಾಗೂ ಸಾರ್ವಜನಿಕರು ಸಹಕಾರ ನೀಡಿದರೆ ಇಂತಹ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬಹುದಾಗಿದೆ, ಅಲ್ಲದೆ ಮುಂದಿನ ದಿನಗಳಲ್ಲಿ ಹೊರ ರಾಜ್ಯಗಳಲ್ಲಿ ನಡೆಯುವ ರಾಷ್ಟ್ರೀಯ ಭಾವೈಕ್ಯ ಶಿಬಿರದಲ್ಲಿ ಪಾಲ್ಗೊಳ್ಳಲು ಅವಕಾಶವಿದ್ದು ಆಸಕ್ತ ಯುವ ಕಲಾವಿದರು ಇದರ ಪ್ರಯೋಜನೆ ಪಡೆದುಕೊಳ್ಳಬೇಕು ಎಂದು ಹೇಳಿದರು.

ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಘಟಕದ ಅಧ್ಯಕ್ಷ ಚಂದಪ್ಪ ಹಕ್ಕಿ ಮಾತನಾಡಿದರು. ಗ್ರಾಮ ಪಂಚಾಯಿತಿ ಸದಸ್ಯ ಹನುಮಂತಪ್ಪ ಹೂಗಾರ, ಚಂದಪ್ಪ ಪುರ್ತಗೇರಿ, ಅನ್ನದಾನೇಶ್ವರ ಯುವಕ ಸಂಘದ ಅಧ್ಯಕ್ಷ ಮಹಾಂತಗೌಡ, ಸಂಗಪ್ಪ ಯಲಿಗಾರ, ಚಂದನಗೌಡ ಪಾಟೀಲ ಇತರರು ಇದ್ದರು.

ಈ ಸಂದರ್ಭದಲ್ಲಿ ಕಳೆದ ಮೂರು ದಿನಗಳಿಂದ ಇಲ್ಲಿ ನಡೆದಿದ್ದ ಯುವ ಮುಂದಾಳತ್ವ ಶಿಬಿರದಲ್ಲಿ ಪಾಲ್ಗೊಂಡಿದ್ದ ಸುಮಾರು 40 ಯುವಕರಿಗೆ ಪ್ರಶಸ್ತಿ ಪತ್ರ ನೀಡಲಾಯಿತು.ಬಸವರಾಜ ಯಡಹಳ್ಳಿ ಸ್ವಾಗತಿಸಿದರು. ಗಂಗಯ್ಯ ವಸ್ತ್ರದ ವಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.