ಶುಕ್ರವಾರ, ಜೂನ್ 18, 2021
28 °C

ಹಮಾಲಿ ಕಾರ್ಮಿಕರ ರಾಜ್ಯ ಸಮಾವೇಶ 4ರಿಂದ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಬ್ಬಳ್ಳಿ: ರಾಜ್ಯ ಹಮಾಲಿ ಕಾರ್ಮಿಕರ ಫೆಡರೇಷನ್‌ ಹಮ್ಮಿಕೊಂಡಿರುವ ಹಮಾಲಿ ಕಾರ್ಮಿಕರ ರಾಜ್ಯ ಮಟ್ಟದ ಸಮಾವೇಶ ಮಾರ್ಚ್‌ 4 ಮತ್ತು 5ರಂದು ನಗರದಲ್ಲಿ ನಡೆಯಲಿದೆ.



‘4ರಂದು ಬೆಳಿಗ್ಗೆ 11 ಗಂಟೆಗೆ ರೈಲು ನಿಲ್ದಾಣ ಸಮೀಪದ ಅಂಬೇಡ್ಕರ್‌ ವೃತ್ತದಿಂದ ಇಂದಿರಾ ಗಾಜಿನ ಮನೆ ವರೆಗೆ ಮೆರವಣಿಗೆ ನಡೆಯಲಿದ್ದು ಅಲ್ಲಿ ಉದ್ಘಾಟನಾ ಸಮಾರಂಭದ ನಂತರ ಸಂಜೆ 4 ಗಂಟೆಗೆ ಎಪಿಎಂಸಿ ಆವರಣದ ವ್ಯಾಪಾರಸ್ಥರ ಸಂಘದಲ್ಲಿ ಪ್ರತಿನಿಧಿ ಸಮ್ಮೇಳನ ಇರುತ್ತದೆ. 5ರಂದು ಸಂಜೆ 4 ಗಂಟೆಗೆ ವ್ಯಾಪಾರಸ್ಥರ ಸಂಘದಲ್ಲಿ ಸಮಾರೋಪ ಸಮಾರಂಭ ನಡೆಯಲಿದೆ’ ಎಂದು ಫೆಡರೇಷನ್‌ ರಾಜ್ಯ ಘಟಕದ ಅಧ್ಯಕ್ಷ ಮಹೇಶ ಪತ್ತಾರ ಈಚೆಗೆ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.



‘ಸಮಾವೇಶದ ಉದ್ಘಾಟನಾ ಸಮಾರಂಭ ಆರ್‌,ಎನ್‌.ಶೆಟ್ಟಿ ಕಲ್ಯಾಣ ಮಂಟಪದಲ್ಲಿ ಮಧ್ಯಾಹ್ನ 12 ಗಂಟೆಗೆ ನಡೆಯಲಿದೆ. ಕೂಡಲಸಂಗಮ ಪಂಚಮ­ಸಾಲಿ ಮಠದ ಜಯ ಮೃತ್ಯುಂಜಯ ಸ್ವಾಮೀಜಿ ಉದ್ಘಾ­ಟಿಸು­ವರು. ಹಮಾಲಿ ಕಾರ್ಮಿಕರ ಫೆಡರೇ­ಷನ್‌ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಕೆ.­ಮಹಾಂತೇಶ ಪ್ರಾಸ್ತಾವಿಕವಾಗಿ ಮಾತನಾಡುವರು’ ಎಂದು ಅವರು ತಿಳಿಸಿದರು.



‘ರಾಜ್ಯದ 146 ಮುಖ್ಯ ಮಾರುಕಟ್ಟೆ ಹಾಗೂ 383 ಉಪಮಾರುಕಟ್ಟೆಗಳಲ್ಲಿ ಮಹಿಳೆಯರು ಸೇರಿ­ದಂತೆ ಒಂದು ಲಕ್ಷಕ್ಕೂ ಹೆಚ್ಚು ಮಂದಿ ಹಮಾಲಿ ಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ. ಗಿರಣಿಗಳು, ಗೋಡೌನ್‌ಗಳು, ಗ್ರಾಮೀಣ ಮಾರುಕಟ್ಟೆಗಳಲ್ಲಿ ಕೆಲಸ ಮಾಡುವವರನ್ನು ಸೇರಿಸಿದರೆ ಈ ಸಂಖ್ಯೆ ಐದು ಲಕ್ಷ ಮೀರುತ್ತದೆ. ಅಸಂಘಟಿತ ವಲಯದ ಕಾರ್ಮಿ­ಕರ ಸಾಮಾಜಿಕ ಭದ್ರತೆಗೆ ಮಂಡಳಿಯನ್ನು ಸ್ಥಾಪಿಸಿದ್ದರೂ ಸರ್ಕಾರ ಈ ವರೆಗೆ ಹಣ ಬಿಡುಗಡೆ ಮಾಡಲಿಲ್ಲ. ಈ ಬಾರಿ ಎಪಿಎಂಸಿ ಹಮಾಲಿ ಕಾರ್ಮಿಕ­ರಿಗಾಗಿ ಬಜೆಟ್‌ನಲ್ಲಿ ‘ಕಾಯಕ ನಿಧಿ’ ಯೋಜನೆ­ಯನ್ನು ಘೋಷಿಸಿದರೂ ಕೇವಲ ₨1­ಕೋಟಿ ಬಿಡುಗಡೆ ಮಾಡಲಾಗಿದೆ. ಇದು ಅಲ್ಪ ಮೊತ್ತ. ಆದರೂ ಇಷ್ಟು ಮಾಡಿದ್ದು ಅಭಿನಂದನೀಯ’ ಎಂದು ಪತ್ತಾರ ಹೇಳಿದರು.



‘ಈ ವರೆಗೆ ಫೆಡರೇಷನ್‌ನಲ್ಲಿ 40 ಸಾವಿರಕ್ಕೂ ಹೆಚ್ಚು ಮಂದಿ ಹೆಸರು ನೋಂದಾಯಿಸಿ­ಕೊಂಡಿದ್ದಾರೆ’ ಎಂದು ಅವರು ವಿವರಿಸಿದರು.



ಎಪಿಎಂಸಿ ಹಮಾಲಿ ಕಾರ್ಮಿಕರ ಸಮನ್ವಯ ಸಮಿತಿ ಕಾರ್ಯಾಧ್ಯಕ್ಷ ದುರಗಪ್ಪ ಚಿಕ್ಕತುಂಬಳ, ಗುರುಸಿದ್ದಪ್ಪ ಅಂಬಿಗೇರ, ಹನಮಂತ ಜಾಲಗಾರ ಹಾಗೂ ಬಸವಣ್ಣೆಪ್ಪ ನೀರಲಗಿ ಉಪಸ್ಥಿತರಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.