ಹರಕೆ ಹೆಸರಿನಲ್ಲಿ ಪ್ರಾಣಿ ಬಲಿ ಬೇಡ

7

ಹರಕೆ ಹೆಸರಿನಲ್ಲಿ ಪ್ರಾಣಿ ಬಲಿ ಬೇಡ

Published:
Updated:

ಬೆಂಗಳೂರು: `ನವರಾತ್ರಿಯ ಆಯುಧಪೂಜೆ, ವಿಜಯದಶಮಿ ಹಾಗೂ ಬಕ್ರೀದ್ ಸಂದರ್ಭದಲ್ಲಿ ಹರಕೆಯ ಹೆಸರಿನಲ್ಲಿ ಪ್ರಾಣಿಗಳ ಬಲಿ ಕೊಡಬಾರದು~ ಎಂದು ವಿಶ್ವ ಪ್ರಾಣಿ ಕಲ್ಯಾಣ ಮಂಡಳಿ ಆಗ್ರಹಿಸಿದೆ.ಸಂಘದ ಅಧ್ಯಕ್ಷ ದಯಾನಂದ ಸ್ವಾಮೀಜಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾ, `ನವರಾತ್ರಿ ಸಂದರ್ಭದಲ್ಲಿ ದೇವಾಲಯಗಳ ಆವರಣಗಳಲ್ಲಿ,  ರಸ್ತೆಗಳಲ್ಲಿ ಸಾವಿರಾರು ಪ್ರಾಣಿಗಳ ಬಲಿ ನೀಡುವ ಮೂಲಕ ದೇವಾಲಯಗಳನ್ನು ವಧಾಲಯಗಳನ್ನಾಗಿ ಮಾರ್ಪಡಿಸಲಾಗುತ್ತದೆ. ಆಯುಧಪೂಜೆಯ ಸಂದರ್ಭದಲ್ಲಿ ವಾಹನಗಳು, ಕಚೇರಿಗಳು, ಕಾರ್ಖಾನೆಗಳಲ್ಲಿ ಯಥೇಚ್ಛವಾಗಿ ಪ್ರಾಣಿಗಳನ್ನು ಬಲಿ ಕೊಡಲಾಗುತ್ತದೆ. ಇದು ಅನಾಗರಿಕ ಹಾಗೂ ಅವೈಜ್ಞಾನಿಕ~ ಎಂದು ಕಿಡಿಕಾರಿದರು.`ಇದೇ 23ರಂದು ಬೆಳಗಾವಿ ಜಿಲ್ಲೆ ಕಕ್ಕೇರಿ ಭಿಷ್ಠಾದೇವಿ ಜಾತ್ರೆ ಸಂದರ್ಭದಲ್ಲಿ 50 ಸಾವಿರಕ್ಕೂ ಅಧಿಕ ಕುರಿ, ಕೋಳಿ, ಮೇಕೆಗಳನ್ನು ಬಲಿ ಕೊಡಲು ಉದ್ದೇಶಿಸಲಾಗಿದೆ. ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಪ್ರಾಣಿಗಳ ಬಲಿ ತಡೆಗಟ್ಟಲು ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು~ ಎಂದು ಅವರು ಒತ್ತಾಯಿಸಿದರು.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry