ಸೋಮವಾರ, ಮೇ 10, 2021
27 °C

ಹರವೆಗೆ ಐಟಿಐ ಕಾಲೇಜು: ಶಾಸಕ ಮನವಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಾಮರಾಜನಗರ: `ಹರವೆ ಗ್ರಾಮಕ್ಕೆ ಸರ್ಕಾರಿ ಐಟಿಐ ಕಾಲೇಜು ಮಂಜೂರು ಮಾಡಿಕೊಡಲು ಕಾರ್ಮಿಕ ಸಚಿವರಿಗೆ ಮನವಿ ಸಲ್ಲಿಸಲಾಗಿದೆ~ ಎಂದು ಶಾಸಕ ಎಚ್.ಎಸ್. ಮಹದೇವಪ್ರಸಾದ್ ತಿಳಿಸಿದರು.ತಾಲ್ಲೂಕಿನ ಹರವೆ ಗ್ರಾಮದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ಹಿಂಭಾಗ ಎಸ್‌ಐಸಿಎಫ್ ಯೋಜನೆಯಡಿ 45 ಲಕ್ಷ ರೂ ವೆಚ್ಚದಡಿ ನಿರ್ಮಿಸುತ್ತಿರುವ ದಾದಿಯರು, `ಡಿ~ ಗ್ರೂಫ್ ನೌಕರರ ವಸತಿಗೃಹ ಹಾಗೂ ಹೆಚ್ಚುವರಿ ಶಸ್ತ್ರಚಿಕಿತ್ಸಾ ಘಟಕದ ಕೊಠಡಿ ನಿರ್ಮಾಣ ಕಾಮಗಾರಿಗೆ ಭಾನುವಾರ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸಮುದಾಯ ಆರೋಗ್ಯ ಕೇಂದ್ರವಾಗಿ ಪರಿವರ್ತಿಸಲು ರಾಜ್ಯ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿತ್ತು. ಇದಕ್ಕೆ ಸರ್ಕಾರದ ಮಟ್ಟದಲ್ಲಿ ಸಮ್ಮತಿ ಸಿಕ್ಕಿದೆ. ತೆರಕಣಾಂಬಿ ಆರೋಗ್ಯ ಕೇಂದ್ರವನ್ನು ಸಮುದಾಯ ಕೇಂದ್ರವಾಗಿ ಪರಿವರ್ತಿಸುವ ಚಿಂತನೆಯಿದೆ.ಕಬ್ಬಹಳ್ಳಿ, ಬೇಗೂರು ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಕಳೆದ ಸಾಲಿನಡಿ ಸಮುದಾಯ ಆರೋಗ್ಯ ಕೇಂದ್ರಗಳಾಗಿ ಪರಿವರ್ತಿಸಲಾಗಿದ್ದು, ಕೊಠಡಿ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದೆ ಎಂದು ವಿವರಿಸಿದರು.

ಗ್ರಾಮದಲ್ಲಿ ಹಿಂದುಳಿದ ವರ್ಗಗಳ ಮೊರಾರ್ಜಿ ದೇಸಾಯಿ ವಸತಿಶಾಲೆ ತೆರೆಯಲು ಚಿಂತಿಸಲಾಗಿದೆ. ತಮ್ಮಡ ಹಳ್ಳಿ- ಹರವೆ, ತಮ್ಮಡಹಳ್ಳಿ- ಹಳೇಪುರದಿಂದ ಗುಂಡ್ಲುಪೇಟೆಗೆ ಹೋಗುವ ರಸ್ತೆ, ಕಾಳನಹುಂಡಿ- ಚಾ.ನಗರ ರಸ್ತೆಯನ್ನು ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆಯಡಿ ಅಭಿವೃದ್ಧಿಪಡಿಸಲಾಗುವುದು ಎಂದರು.ಕೆರೆ ಪುನರುಜ್ಜೀವನಕ್ಕೆ 20 ಲಕ್ಷ ರೂ:


ಗ್ರಾಮದಲ್ಲಿ ಅಂತರ್ಜಲಮಟ್ಟ ವೃದ್ಧಿಸಿ ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಕೆರೆ ಪುನರುಜ್ಜೀವನಕ್ಕೆ 20 ಲಕ್ಷ ರೂ ಮಂಜೂರಾಗಿದ್ದು, ಶೀಘ್ರವೇ ಕಾಮಗಾರಿ ಆರಂಭವಾಗಲಿದೆ ಎಂದರು. ಕೆರೆಹಳ್ಳಿ, ಸಾಗಡೆಯಲ್ಲಿ ಕಿರಿಯ ಆರೋಗ್ಯ ಕೇಂದ್ರ ತೆರೆಯಲಾಗಿದೆ. ಕುಮಚಹಳ್ಳಿ, ಹೀರೆಬೇಗೂರಿನಲ್ಲಿ ಕಿರಿಯ ಆರೋಗ್ಯ ಕೇಂದ್ರ ತೆರೆಯಲಾಗು ವುದು ಎಂದರು.ಸಮಾರಂಭದಲ್ಲಿ ತಾ.ಪಂ. ಸದಸ್ಯೆ ಪ್ರೇಮಾ, ಗ್ರಾ.ಪಂ. ಅಧ್ಯಕ್ಷ ಶಿವ ಕುಮಾರ್, ಸದಸ್ಯರಾದ ಪುಟ್ಟಸ್ವಾಮಿ, ಮಹದೇವಸ್ವಾಮಿ, ಮಲೆಯೂರು ಗ್ರಾ.ಪಂ. ಅಧ್ಯಕ್ಷೆ ಪುಟ್ಟಮ್ಮ, ಎಸ್‌ಡಿಎಂಸಿ ಅಧ್ಯಕ್ಷ ಮಾದಪ್ಪ, ಜಿ.ಪಂ. ಮಾಜಿ ಸದಸ್ಯ ಪಿ. ಮರಿಸ್ವಾಮಿ ಇತರರು ಹಾಜರಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.