ಗುರುವಾರ , ಮೇ 26, 2022
30 °C

ಹರಿಶ್ಚಂದ್ರಘಾಟ್ ಬಡಾವಣೆಗೆ ಸೌಲಭ್ಯದ ಕೊರತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹಿರಿಯೂರು: ನಗರದ ಹರಿಶ್ಚಂದ್ರಘಾಟ್ ಬಡಾವಣೆಯ ಬಡವರಿಗೆ ಸ್ಮಶಾನ ಮಂಜೂರು ಮಾಡಲಾಗಿದೆ. ಆದರೆ,  ಮೂಲಸೌಲಭ್ಯ ಕಲ್ಪಿಸದೇ ಇರುವುದು ಬೇಸರದ ಸಂಗತಿ ಎಂದು ಶನಿವಾರ ಬಡಾವಣೆಯಲ್ಲಿ ಪುರಸಭೆ ವತಿಯಿಂದ ಹಮ್ಮಿಕೊಂಡಿದ್ದ ಕುಂದು-ಕೊರತೆ ಸಭೆಯಲ್ಲಿ ನಾಗರಿಕರು ದೂರಿದರು.ಸ್ಮಶಾನ ಭೂಮಿ ಮಂಜೂರು ಮಾಡಬೇಕು ಎಂದು ಪುರಸಭೆ ಹಾಗೂ ತಾಲ್ಲೂಕು ಕಚೇರಿ ಮುಂದೆ ನಿವಾಸಿಗಳು ಧರಣಿ ನಡೆಸಿದ್ದರಿಂದ ತಹಶೀಲ್ದಾರ್ ಪ್ರಯತ್ನ ನಡೆಸಿ, ಸ್ಮಶಾನಕ್ಕೆ ಜಾಗ ಮಂಜೂರು ಮಾಡಿಸಿದ್ದಾರೆ.ಆದರೆ, ಬಡಾವಣೆಯಲ್ಲಿ ಸರಿಯಾದ ರಸ್ತೆಯಿಲ್ಲ, ಚರಂಡಿ ನಿರ್ಮಿಸಿಲ್ಲ. ಕುಡಿಯುವ ನೀರು ಪೂರೈಕೆ ಸಮರ್ಪಕವಾಗಿಲ್ಲ. ಖಾಲಿ ನಿವೇಶನಗಳಲ್ಲಿ ಬಳ್ಳಾರಿಜಾಲಿ ಮುಳ್ಳು ಬೆಳೆದು ಹಂದಿಗಳ ವಾಸಸ್ಥಾನವಾಗಿದೆ. ಓವರ್ ಹೆಡ್‌ಟ್ಯಾಂಕ್ ನಿರ್ಮಿಸುತ್ತೇವೆ ಎಂದು ನೀಡಿದ್ದ ಭರವಸೆ ಇನ್ನೂ ಈಡೇರಿಲ್ಲ ಎಂದು ನಿವಾಸಿಗಳ ಪರವಾಗಿ ಮಾತನಾಡಿದ ಘಾಟ್‌ರವಿ ಆರೋಪಿಸಿದರು.ಬಡಾವಣೆಯಲ್ಲಿ 25-30 ವರ್ಷಗಳಿಂದ ವಾಸಿಸುತ್ತಿರುವವರಿಗೆ ನಿವೇಶನದ ಹಕ್ಕುಪತ್ರ ನೀಡಿಲ್ಲ. ತಕ್ಷಣ ಹಕ್ಕುಪತ್ರ ನೀಡಿ ಸರ್ಕಾರದ ಯಾವುದಾದರೂ ಯೋಜನೆಯಡಿ ಮನೆಗಳನ್ನು ನಿರ್ಮಿಸಿಕೊಡಬೇಕು. ರಸ್ತೆ ನಿರ್ಮಾಣಕ್ಕೆ ಟೆಂಡರ್ ಕರೆದಿದ್ದು, ತಕ್ಷಣ ಕಾಮಗಾರಿ ಆರಂಭಿಸಬೇಕು ಎಂದು ಅವರು ಒತ್ತಾಯಿಸಿದರು.ಪುರಸಭೆಯ ಮುಖ್ಯಾಧಿಕಾರಿ ಚಂದ್ರಶೇಖರಪ್ಪ ಮಾತನಾಡಿ, ಸುಮಾರು 2 ಸಾವಿರ ನಿವೇಶನರಹಿತರಿಗೆ ನಿವೇಶನ ನೀಡುವ ಪ್ರಕ್ರಿಯೆ ಪ್ರಗತಿಯಲ್ಲಿದೆ. ಆದಷ್ಟು ಬೇಗ ನಿವೇಶನ ಹಂಚಿಕೆ ಮಾಡಲಾಗುವುದು ಎಂದು ಭರವಸೆ ನೀಡಿದರು.ನಾಗರಿಕರು ಸಭೆಯಲ್ಲಿ ನಾಗರಿಕರು ವಿವಿಧ ಬೇಡಿಕೆಗಳನ್ನು ಮಂಡಿಸಿದರು. ಪುರಸಭಾ ಅಧ್ಯಕ್ಷೆ ಮಂಜುಳಾ ವೆಂಕಟೇಶ್ ಕುಂದು- ಕೊರತೆ ಸಭೆ ಉದ್ಘಾಟಿಸಿದರು. ಉಪಾಧ್ಯಕ್ಷೆ ಜ್ಯೋತಿಲಕ್ಷ್ಮೀ ಗೋಪಿಯಾದವ್, ತಹಶೀಲ್ದಾರ್ ಎನ್. ತಿಪ್ಪೇಸ್ವಾಮಿ, ಡಿವೈಎಸ್ಪಿ ಎನ್. ರುದ್ರಮುನಿ, ರಂಗಪ್ಪ, ಫಕೃದ್ದೀನ್‌ಸಾಬ್ ಪಾಲ್ಗೊಂಡಿದ್ದರು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.