ಹಲಬರ್ಗಾ: ಉಲ್ಬಣಿಸಿದ ವಾಂತಿ- ಭೇದಿ

ಸೋಮವಾರ, ಮೇ 20, 2019
29 °C

ಹಲಬರ್ಗಾ: ಉಲ್ಬಣಿಸಿದ ವಾಂತಿ- ಭೇದಿ

Published:
Updated:

ಬೀದರ್: ಭಾಲ್ಕಿ ತಾಲ್ಲೂಕಿನ ಹಲಬರ್ಗಾ ಗ್ರಾಮದಲ್ಲಿ ವಾಂತಿ ಭೇದಿ ಕಾಣಿಸಿಕೊಂಡಿದ್ದು, ನಾಗರಿಕರಲ್ಲಿ ಆತಂಕ ಮೂಡಿಸಿದೆ.ವಾಂತಿ ಭೇದಿಯಿಂದಾಗಿ ಗ್ರಾಮದ ಒಟ್ಟು 11 ಜನ ಗುರುವಾರ ಮತ್ತು ಶುಕ್ರವಾರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆಗೆ ಒಳಗಾಗಿದ್ದಾರೆ. ಈ ಪೈಕಿ ಕೆಲವರನ್ನು ಚಿಕಿತ್ಸೆಗಾಗಿ ಬೀದರ್ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.ಗ್ರಾಮದಲ್ಲಿ ಕಳೆದ ಒಂದು ತಿಂಗಳಿಂದ ಟ್ರಾನ್ಸ್‌ಫಾರ್ಮರ್ ಸುಟ್ಟು ಹೋಗಿದೆ. ಇದನ್ನು ದುರಸ್ತಿ ಮಾಡುವಂತೆ ಅನೇಕ ಬಾರಿ ಜೆಸ್ಕಾಂ ಅಧಿಕಾರಿಗಳ ಗಮನ ಸೆಳೆಯಲಾಗಿದೆ. ಅದಾಗಿಯು ಯಾವುದೇ ಕ್ರಮ ಕೈಗೊಂಡಿಲ್ಲ. ಹೀಗಾಗಿ ಗ್ರಾಮದಲ್ಲಿ ಕಳೆದ ಒಂದು ತಿಂಗಳಿಂದ ಬೋರ್‌ವೆಲ್ ನೀರು ಸರಬರಾಜು ಆಗುತ್ತಿಲ್ಲ. ಬಾವಿ ನೀರನ್ನೇ ಅವಲಂಬಿಸಬೇಕಾಗಿದೆ. ಕಲುಷಿತ ನೀರು ಕುಡಿದಿದ್ದರಿಂದಲೇ ವಾಂತಿ ಭೇದಿ ಉಲ್ಬಣಗೊಂಡಿರಬೇಕು ಎಂದು ಸಂಶಯ ವ್ಯಕ್ತಪಡಿಸಿದ್ದಾರೆ.ವಾಂತಿ ಭೇದಿ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಗ್ರಾಮಸ್ಥರಲ್ಲಿ ನೀರು ಹಾಗೂ ಸ್ವಚ್ಛತೆಯ ಕುರಿತು ಜಾಗೃತಿ ಮೂಡಿಸುವುದಕ್ಕಾಗಿ ಗ್ರಾಮ ಪಂಚಾಯಿತಿ ವತಿಯಿಂದ ಡಂಗೂರು ಸಾರಲಾಗಿದೆ ಎಂದು ಗ್ರಾಮ ಪಂಚಾಯಿತಿ ಸದಸ್ಯ ಗಣಪತಿ ಮೇತ್ರೆ, ಯುವ ಪ್ರಮುಖರಾದ ಸಂಜು ಪ್ರಭಾ ಮತ್ತಿತರರು ತಿಳಿಸಿದ್ದಾರೆ.

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry