ಹಲವೆಡೆ ಭಾರಿ ಮಳೆ ಸಾಧ್ಯತೆ
ಬೆಂಗಳೂರು: ಗುರುವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ ದಕ್ಷಿಣ ಒಳನಾಡಿನಲ್ಲಿ ನೈರುತ್ಯ ಮುಂಗಾರು ಚುರುಕುಗೊಂಡಿದೆ.
ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಮಳೆಯಾಗಿದೆ. ನೀಲ್ಕುಂದದಲ್ಲಿ 17 ಸೆಂ.ಮೀ. ಮಳೆಯಾಗಿದೆ.
ಕೊಲ್ಲೂರು 13, ಆಗುಂಬೆ 12, ಜೋಯಿಡಾ 11, ಶಿರಸಿ 10, ಕ್ಯಾಸಲ್ ರಾಕ್ 9, ಗೋಕರ್ಣ, ಕದ್ರಾ, ತಾಳಗುಪ್ಪ, ತೀರ್ಥಹಳ್ಳಿ 8, ಭಟ್ಕಳ, ಮಂಚಿಕೇರಿ, ಸಾಗರ, ಹೊಸನಗರ, ಕಮ್ಮರಡಿಯಲ್ಲಿ 7 ಸೆಂ.ಮೀ. ಮಳೆಯಾಗಿದೆ.
ಮುನ್ಸೂಚನೆ: ಮುಂದಿನ 48 ಗಂಟೆಗಳಲ್ಲಿ ಕರಾವಳಿ, ದಕ್ಷಿಣ ಒಳನಾಡಿನ ಹಲವೆಡೆ ಮತ್ತು ಉತ್ತರ ಒಳನಾಡಿನ ಕೆಲವೆಡೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.