ಹಲವೆಡೆ ಮಳೆ ಸಾಧ್ಯತೆ

7

ಹಲವೆಡೆ ಮಳೆ ಸಾಧ್ಯತೆ

Published:
Updated:

ಬೆಂಗಳೂರು: ಗುರುವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ ರಾಜ್ಯದ ಕರಾವಳಿಯಲ್ಲಿ ನೈರುತ್ಯ ಮುಂಗಾರು ಕ್ಷೀಣಿಸಿದೆ. ಉತ್ತರ ಒಳನಾಡಿನ ಕೆಲವು ಪ್ರದೇಶಗಳು, ಕರಾವಳಿ, ದಕ್ಷಿಣ ಒಳನಾಡಿನ ಅಲ್ಲಲ್ಲಿ ಮಳೆಯಾಗಿದೆ. ಕೋಣನೂರಿನಲ್ಲಿ 6 ಸೆಂ.ಮೀ. ಮಳೆಯಾಗಿದೆ.



ಕೆರೂರು 5, ನಾರಾಯಣಪುರ, ಹಯ್ಯಾಳ, ಆವತಿ, ರಾಮನಗರ 4, ಕೆಂಬಾವಿ, ಕೊಟ್ಟಿಗೆಹಾರ, ಬಾಳೆಹೊನ್ನೂರು 3, ಶಹಾಪುರ, ಲಿಂಗಸುಗೂರು, ಸಾಗರ, ಹೊಸನಗರ, ಎನ್. ಆರ್.ಪುರ 2, ಹಿಡಕಲ್, ರಾಮದುರ್ಗ, ಗದಗ, ರೋಣ, ನರಗುಂದ, ಬೆವೂರು, ಹನುಮಸಾಗರ ತಲಾ 1 ಸೆಂ.ಮೀ. ಮಳೆಯಾಗಿದೆ.



ಮುನ್ಸೂಚನೆ: ಮುಂದಿನ 48 ಗಂಟೆಗಳಲ್ಲಿ ಕರಾವಳಿ, ಉತ್ತರ ಮತ್ತು ದಕ್ಷಿಣ ಒಳನಾಡಿನ ಕೆಲವು ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ  ನೀಡಿದೆ.

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry