ಹಲವೆಡೆ ಮಳೆ

7

ಹಲವೆಡೆ ಮಳೆ

Published:
Updated:

ಬೆಂಗಳೂರು: ಮಂಗಳವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ ರಾಜ್ಯದ ದಕ್ಷಿಣ ಒಳನಾಡಿನ ಕೆಲವೆಡೆ ಹಾಗೂ ಕರಾವಳಿಯಲ್ಲಿ ಮಳೆಯಾಗಿದ್ದು, ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆದಿದೆ.ನಾಪೋಕ್ಲು 5 ಸೆಂ.ಮೀ, ಭಾಗಮಂಡಲ, ಮಾದಾಪುರ 4, ಸರಗೂರು, ಕೆ.ಆರ್.ಸಾಗರ, ಟಿ.ಜಿ.ಹಳ್ಳಿ 3, ಕುಶಾಲನಗರ, ಹೊನಕರೆ, ಮದ್ದೂರು, ಕೋಲಾರ, ಹುಲಿಯೂರುದುರ್ಗ 2, ಮೂಲ್ಕಿ, ಬೆಳ್ತಂಗಡಿ, ಪೊನ್ನಂಪೇಟೆ, ಹಾರಂಗಿ, ಸೋಮವಾರಪೇಟೆ, ನಂಜನಗೂಡು, ನಾಗಮಂಗಲ, ಹೆಸರಘಟ್ಟ, ಚನ್ನಪಟ್ಟಣ, ಕನಕಪುರದಲ್ಲಿ 1ಸೆಂ.ಮೀ ಮಳೆಯಾಗಿದೆ. ಬಳ್ಳಾರಿಯಲ್ಲಿ ಗರಿಷ್ಠ ಉಷ್ಣಾಂಶ 33.8 ಡಿಗ್ರಿ ಸೆಲ್ಸಿಯಸ್ ಹಾಗೂ ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಅತಿ ಕನಿಷ್ಠ ಉಷ್ಣಾಂಶ 14.4 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.ಮುನ್ಸೂಚನೆ: ಮುಂದಿನ 48 ಗಂಟೆಗಳ ಕಾಲ ದಕ್ಷಿಣ ಒಳನಾಡಿನ ಹಲವು ಪ್ರದೇಶಗಳು ಮತ್ತು ಕರಾವಳಿಯಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry