ಬುಧವಾರ, ಮೇ 18, 2022
28 °C

ಹಲ್ಲೆ: ಕಠಿಣ ಕ್ರಮಕ್ಕೆ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಧುಗಿರಿ: ಎಂಜಿನಿಯರ್ ಮೇಲೆ ಹಲ್ಲೆ ಮಾಡಿರುವ ಗ್ರಾ.ಪಂ. ಮಾಜಿ ಅಧ್ಯಕ್ಷ ನರಸಿಂಹಮೂರ್ತಿಯನ್ನು ಕೂಡಲೇ ಗೂಂಡಾ ಕಾಯಿದೆಯಡಿ ಬಂಧಿಸಿ ಕ್ರಮ ಕೈಗೊಳ್ಳದಿದ್ದಲ್ಲಿ ಹಂತ ಹಂತವಾಗಿ ಹೋರಾಟದ ಸ್ವರೂಪವನ್ನು ತೀವ್ರಗೊಳಿಸಲಾಗುವುದು ಎಂದು ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಆರ್.ಮಂಜುನಾಥ್ ಎಚ್ಚರಿಸಿದ್ದಾರೆ. ಪಂಚಾಯತ್ ರಾಜ್ ಎಂಜಿನಿಯರಿಂಗ್ ಇಲಾಖೆ ಜ್ಯೂನಿಯರ್ ಎಂಜಿನಿಯರ್ ನಾಗಭೂಷಣ್ ಮೇಲೆ ಶನಿವಾರ ಗ್ರಾ.ಪಂ. ಮಾಜಿ ಅಧ್ಯಕ್ಷ ನರಸಿಂಹಮೂರ್ತಿ ಹಲ್ಲೆ ಮಾಡಿ, ಜಾತಿ ನಿಂದನೆ ಮತ್ತು ಕೊಲೆ ಬೆದರಿಕೆ ಆರೋಪ ಮಾಡಿ ಪೊಲೀಸರಿಗೆ ದೂರು ಕೊಟ್ಟಿರುವುದನ್ನು ಖಂಡಿಸಿ ಮಂಗಳವಾರ ತಾಲ್ಲೂಕು ಸರ್ಕಾರಿ ನೌಕರರ ಸಂಘದ ನೇತೃತ್ವದಲ್ಲಿ ಎಂಜಿನಿಯರಿಂಗ್ ವಿಭಾಗದ ಎಲ್ಲ ಎಂಜಿನಿಯರ್‌ಗಳು ಪಟ್ಟಣದಲ್ಲಿ ಮೆರವಣಿಗೆ ನಡೆಸಿದರು.ಪಂಚಾಯತ್ ರಾಜ್ ಎಂಜಿನಿಯರಿಂಗ್ ಇಲಾಖೆ ಎಇಇ ಲೋಕೇಶ್, ತಾ.ಪಂ ಎಇ ಚಂದ್ರಪ್ಪ, ಪಂಚಾಯತ್ ರಾಜ್ ಎಂಜಿನಿಯರಿಂಗ್ ಇಲಾಖೆ ಎಇ ರಂಗನಾಥ್, ಜೆ.ಇ ಬ್ರಹ್ಮದೇವ, ಸರ್ಕಾರಿ ನೌಕರರ ಸಂಘದ ಗೌರವಾಧ್ಯಕ್ಷ ಪುಟ್ಟನರಸಯ್ಯ, ಪ್ರಧಾನ ಕಾರ್ಯದರ್ಶಿ ಟಿ.ತಿಪ್ಪೇಸ್ವಾಮಿ ಮಾತನಾಡಿದರು. ಎ.ಇ.ಇ ಲಲಿತೇಶ್ವರ್, ಜೆ.ಇ ನಾಗಭೂಷಣ, ಸಂಘದ ಪದಾಧಿಕಾರಿಗಳಾದ ಲಕ್ಷ್ಮೀನರಸಯ್ಯ, ರಂಗಧಾಮಯ್ಯ, ಪರಶುರಾಂ, ವಿ.ಎಚ್. ವೆಂಕಟೇಶ್, ಕೆ.ಆರ್. ರಂಗನಾಥ್, ಹೆಂಜಾರಪ್ಪ ಇದ್ದರು. ಮನವಿ: ಆರೋಪಿ ನರಸಿಂಹಮೂರ್ತಿ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸುವ ಮನವಿ ಪತ್ರವನ್ನು ತಹಶೀಲ್ದಾರ್ ಆರ್.ನಾಗರಾಜಶೆಟ್ಟಿ ಮತ್ತು ಸಬ್ ಇನ್ಸ್‌ಪೆಕ್ಟರ್ ಎಲ್.ಆಂಜಪ್ಪ ಅವರಿಗೆ ಸಲ್ಲಿಸಲಾಯಿತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.