ಶನಿವಾರ, ಜನವರಿ 18, 2020
20 °C

ಹಲ್ಲೆ: ಸದಸ್ಯನನ್ನು ಬಂಧಿಸುವಂತೆ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತಲಘಟ್ಟಪುರ: `ಕುಂಬಳಗೋಡು ಗ್ರಾಮ ಪಂಚಾಯ್ತಿಯ ಅಭಿವೃದ್ಧಿ ಅಧಿಕಾರಿ (ಪಿಡಿಒ) ಮತ್ತು ಕಾರ್ಯದರ್ಶಿ ಮೇಲೆ ಹಲ್ಲೆ ಮಾಡಿದ ಪಂಚಾಯಿತಿ ಸದಸ್ಯ ನರಸಿಂಹಮೂರ್ತಿ ಅವರನ್ನು ಬಂಧಿಸಬೇಕು. ಅವರ ಸದಸ್ಯತ್ವವನ್ನು ರದ್ದು ಮಾಡಬೇಕು~ ಎಂದು ಒತ್ತಾಯಿಸಿ ಪಂಚಾಯಿತಿ ನೌಕರರು ಬನಶಂಕರಿ ಬಳಿ ಇರುವ ಜಿಲ್ಲಾ ಪಂಚಾಯ್ತಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು.`ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್‌ರಾಜ್ ಇಲಾಖೆ ನೌಕರರ ಸಂಘದ ಅಧ್ಯಕ್ಷ ಪರಶಿವಮೂರ್ತಿ ಮತ್ತು ಕಾರ್ಯದರ್ಶಿ ರಮೇಶ್ ಮಾತನಾಡಿ, `ಹಲವು ಬಾರಿ ನೌಕರರ ಮೇಲೆ ದೌರ್ಜನ್ಯ ನಡೆಸಿರುವ ಸದಸ್ಯನ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು. ನೌಕರರ ಮೇಲೆ ನಡೆಯುತ್ತಿರುವ ದೌರ್ಜನ್ಯ ತಡೆಗಟ್ಟಬೇಕು~ ಎಂದು ಆಗ್ರಹಿಸಿದರು.ಸಂಘದ ಬೆಂಗಳೂರು ಜಿಲ್ಲೆ ಅಧ್ಯಕ್ಷ ಚೆಲುವರಂಗೇಗೌಡ, ಕಾರ್ಯದರ್ಶಿ ಶ್ರೀಧರ್ ಮಾತನಾಡಿದರು.

ಪ್ರತಿಭಟನಾನಿರತರಿಂದ ಮನವಿ ಸ್ವೀಕರಿಸಿ ಮಾತನಾಡಿದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಸೂರ್ಯನಾರಾಯಣರಾವ್, ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಸರ್ಕಾರಕ್ಕೆ ಪತ್ರ ಬರೆಯುವೆ ಎಂದು ಭರವಸೆ ನೀಡಿದರು.

ಪ್ರತಿಕ್ರಿಯಿಸಿ (+)