ಶುಕ್ರವಾರ, ಏಪ್ರಿಲ್ 23, 2021
23 °C

ಹಳ್ಳಿಗಳಿಗೆ ತಲುಪದ ಬ್ಯಾಂಕಿಂಗ್ ಸೇವೆ: ವಿಷಾದ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಪಿರಿಯಾಪಟ್ಟಣ: ದೇಶದ ಹಲವು ಗ್ರಾಮಗಳಲ್ಲಿ ಇನ್ನೂ ಬ್ಯಾಂಕಿಂಗ್ ಸೌಲಭ್ಯದ ಅರಿವಿಲ್ಲ. ಹಳ್ಳಿಗರು ಬ್ಯಾಂಕಿಂಗ್ ಸೌಲಭ್ಯಗಳಿಂದ ವಂಚಿತ ವಾಗುತ್ತಿದ್ದಾರೆ ಎಂದು ನಬಾರ್ಡ್ ಸಹಾಯಕ ಮಹಾಪ್ರಬಂಧಕ ಎಸ್. ಅರವಮುದಮ್ ಬೇಸರ ವ್ಯಕ್ತಪಡಿಸಿದರು.ತಾಲ್ಲೂಕಿನ ಸತ್ಯಗಾಲ ಗ್ರಾಮದಲ್ಲಿ ಶನಿವಾರ ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ ವತಿಯಿಂದ ಹಮ್ಮಿಕೊಂಡಿದ್ದ ಆರ್ಥಿಕ ಸಾಕ್ಷರತೆ ಮತ್ತು ಆರ್ಥಿಕ ಸೇರ್ಪಡೆ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ಜಿಲ್ಲೆಯಲ್ಲಿ 2 ಸಾವಿರಕ್ಕಿಂತ ಕಡಿಮೆ ಜನಸಂಖ್ಯೆ ಹೊಂದಿರುವ 21 ಹಳ್ಳಿಗಳ್ಳಲ್ಲಿ ಆರ್ಥಿಕ ಸಾಕ್ಷರತಾ ಆಂದೋಲನ ಅಡಿಯಲ್ಲಿ ಜಾಗೃತಿ ಮೂಡಿಸುವ ವಿವಿಧ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ಹಿಂದುಳಿದ ಮತ್ತು ಅಭಿವೃದ್ಧಿ ಹೊಂದುತ್ತಿರುವ ಗ್ರಾಮಗಳನ್ನು ದೃಷ್ಟಿಯಲ್ಲಿಟ್ಟುಕೊಂಡು ಈ ಕಾರ್ಯಕ್ರಮ ರೂಪಿಸಲಾಗಿದೆ ಎಂದರು.ಈ ಯೋಜನೆಗೆ ಪೂರಕವಾಗಿ ನಬಾರ್ಡ್ ಹಲವು ಉಪಯುಕ್ತ ಕಾರ್ಯಕ್ರಮಗಳನ್ನು ಗ್ರಾಮೀಣ ಕೃಷಿ ಅವಲಂಬಿತರಿಗೆ ಹಮ್ಮಿಕೊಂಡಿದೆ. ಈ ಕಾರ್ಯಕ್ರಮಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಲು ವಾಣಿಜ್ಯ ಬ್ಯಾಂಕ್‌ಗಳಿಗೆ ಸೂಚಿಸಿದೆ ಎಂದರು.ಜಿಲ್ಲಾ ಲೀಡ್ ಬ್ಯಾಂಕ್ ಮುಖ್ಯ ವ್ಯವಸ್ಥಾಪಕ ಎಂ.ಬಿ. ಚಿನ್ನಪ್ಪ ಮಾತನಾಡಿ, ಜಿಲ್ಲೆಯ ಹಲವು ಗ್ರಾಮಗಳಲ್ಲಿ ಕಿರು ಶಾಖೆಗಳನ್ನು ಪ್ರಾರಂಭಿಸಲು ನಿರ್ಧರಿಸಲಾಗಿದೆ. ಬ್ಯಾಂಕ್‌ಗಳಲ್ಲಿ ದೊರೆಯುವ ಸೇವೆಗಳು ಪ್ರಸ್ತುತ ದಿನಗಳಲ್ಲಿ ಅವಶ್ಯಕತೆಯಿದ್ದು ಆರ್ಥಿಕ ಶಿಸ್ತನ್ನು ಕಾಯ್ದುಕೊಳ್ಳಲು ಉಪಯುಕ್ತವಾಗಿದೆ ಎಂದರು.ಮಂಗಲ್ ಎಂ.ಯೋಗೀಶ್, ಸ್ಟೇಟ್ ಬ್ಯಾಂಕ್ ಆಫ್ ಮೈಸೂರು ಶಾಖಾ ವ್ಯವಸ್ಥಾಪಕ ಅರುಣ್‌ಕುಮಾರ್, ವಿತ್ತೀಯ ಸಾಕ್ಷರತೆ ಮತ್ತು ಸಾಲ ಸಮಾಲೋಚನಾ ಟ್ರಸ್ಟ್‌ನ ಶಿವರುದ್ರಪ್ಪ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ತಿಮ್ಮೇಗೌಡ ಉಪಸ್ಥಿತರಿದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.