ಹವಾಮಾನ ವರದಿ

7

ಹವಾಮಾನ ವರದಿ

Published:
Updated:

ರಾಜ್ಯದ ಹಲವೆಡೆ ಮಳೆ

ಬೆಂಗಳೂರು:
ಶನಿವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ ರಾಜ್ಯದ ದಕ್ಷಿಣ ಒಳನಾಡಿನ ಕೆಲವಡೆ ಹಾಗೂ ಕರಾವಳಿಯ ಹಲವು ಪ್ರದೇಶಗಳಲ್ಲಿ ಮಳೆಯಾಗಿದ್ದು, ರಾಜ್ಯದ ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆದಿದೆ.ಸುಳ್ಯದಲ್ಲಿ 4 ಸೆಂ.ಮೀ ಮಳೆಯಾಗಿದೆ. ಧರ್ಮಸ್ಥಳ, ಶ್ರೀನಿವಾಸಪುರ, ಬಂಗಾರಪೇಟೆ, ಮಾಗಡಿ, ಚನ್ನಪಟ್ಟಣ 2, ಬೆಳ್ತಂಗಡಿ, ಸುಬ್ರಹ್ಮಣ್ಯ, ಮಡಿಕೇರಿ, ವಿರಾಜಪೇಟೆ, ಕೊಟ್ಟಿಗೆಹಾರ, ಸಕಲೇಶಪುರ, ಆಲೂರು, ಹಳ್ಳಿಮೈಸೂರು, ಮಲೆಮಹದೇಶ್ವರ ಬೆಟ್ಟ, ಹೊನಕೆರೆ, ಮಂಡ್ಯ, ಕೋಲಾರ, ರಾಯಲಪಾಡು, ಹೊಸಕೋಟೆ, ದೇವನಹಳ್ಳಿ, ಹುಲಿಯೂರುದುರ್ಗ, ಕುಣಿಗಲ್, ಮಧುಗಿರಿ, ಚಿಂತಾಮಣಿ, ರಾಮನಗರದಲ್ಲಿ 1 ಸೆಂ.ಮೀ ಮಳೆಯಾಗಿದೆ. ಬಳ್ಳಾರಿಯಲ್ಲಿ ಗರಿಷ್ಠ ಉಷ್ಣಾಂಶ 33.4 ಡಿಗ್ರಿ ಸೆಲ್ಸಿಯಸ್ ಮತ್ತು ದಾವಣಗೆರೆಯಲ್ಲಿ ಕನಿಷ್ಠ ಉಷ್ಣಾಂಶ 16 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.ಮುನ್ಸೂಚನೆ: 
ಮುಂದಿನ 48 ಗಂಟೆಗಳ ಕಾಲ ಕರಾವಳಿಯ ಹಲವು ಪ್ರದೇಶಗಳು ಸೇರಿದಂತೆ ರಾಜ್ಯದ ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವೆಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry