ಶನಿವಾರ, ಏಪ್ರಿಲ್ 10, 2021
29 °C

ಹವಾಮಾನ ವರದಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಜ್ಯದ ಹಲವೆಡೆ ಮಳೆ

ಬೆಂಗಳೂರು:
ಸೋಮವಾರ ಬೆಳಿಗ್ಗೆ 8.30 ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ ಕರಾವಳಿ ಮತ್ತು ರಾಜ್ಯದ ಉತ್ತರ ಒಳನಾಡಿನಲ್ಲಿ ಈಶಾನ್ಯ ಮಾರುತ ದುರ್ಬಲವಾಗಿದ್ದು, ರಾಜ್ಯದ ಹಲವು ಪ್ರದೇಶಗಳಲ್ಲಿ ಮಳೆಯಾಗಿದೆ.



ಕೊಡಗು ಜಿಲ್ಲೆಯ ಹಾರಂಗಿಯಲ್ಲಿ ಅತಿ ಹೆಚ್ಚು 13 ಸೆಂ.ಮೀ ಮಳೆಯಾಗಿದೆ. ಭಾಗಮಂಡಲ. ಮಡಿಕೇರಿ 7, ಮಾದಾಪುರ 5, ಮೂರ್ನಾಡಿನಲ್ಲಿ 3, ಸೆಂ.ಮೀ ಮಳೆಯಾಗಿದೆ. ಚಾಮರಾಜನಗರದಲ್ಲಿ ಕನಿಷ್ಠ ಉಷ್ಣಾಂಶ 17.4 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.



ಮುನ್ಸೂಚನೆ: ಮುಂದಿನ 48 ಗಂಟೆಗಳಲ್ಲಿ ಕರಾವಳಿ ಕೆಲವು ಪ್ರದೇಶಗಳು ಸೇರಿದಂತೆ ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಹಲವೆಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.