ಹೊಸನಗರ: ಸಾಗರ–ಹೊಸನಗರ–ಕೊಲ್ಲೂರು ಸಂಪರ್ಕದ ಶರಾವತಿ ಹಿನ್ನೀರಿನ ಹಸಿರುಮಕ್ಕಿ ಸೇತುವೆ ನಿರ್ಮಾಣಕ್ಕೆ ಬದ್ಧ ಎಂದು ಜವಳಿ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಬಾಬುರಾವ್ ಚಿಂಚನಸೂರ್ ಹೇಳಿದರು.

₨3.15 ಕೋಟಿ ವೆಚ್ಚದಲ್ಲಿ ಹಸಿರುಮಕ್ಕಿ-–ಕೆ.ಬಿ. ಸರ್ಕಲ್ ಕಡವು ಸೇವೆಗೆ ಲಾಂಚ್ ನಿರ್ಮಾಣ ಮತ್ತು ಲ್ಯಾಂಡಿಂಗ್ ರ್್ಯಾಂಪ್ ನಿರ್ಮಾಣ ಕಾಮಗಾರಿಗಳಿಗೆ ಶನಿವಾರ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.

ವಿಧಾನಸಭಾಧ್ಯಕ್ಷ ಕಾಗೋಡು ತಿಮ್ಮಪ್ಪ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸೇತುವೆ ನಿರ್ಮಾಣದ ಕನಸು ಹತ್ತಿರ ಆಗುತ್ತಿದೆ. ಆದರೂ, ಸಹ ಹಸಿರುಮಕ್ಕಿ ಹೊಳೆಗೆ ಹೊಸ ಲಾಂಚ್ ವ್ಯವಸ್ಥೆಯನ್ನು ಶೀಘ್ರದಲ್ಲಿ ಆರಂಭಿಸಲಾಗುವುದು ಎಂದರು.

ವಿಧಾನ ಪರಿಷತ್ ಸಭಾಪತಿ ಡಿ.ಎಚ್. ಶಂಕರಮೂರ್ತಿ, ಸಂಸತ್ ಸದಸ್ಯ ಬಿ.ವೈ.ರಾಘವೇಂದ್ರ, ಜಿಲ್ಲಾ ಪಂಚಾಯ್ತಿ ಸದಸ್ಯರಾದ ಶುಭಾ ಕೃಷ್ಣಮೂರ್ತಿ, ಕಲಗೋಡು ರತ್ನಾಕರ್, ತಾಲ್ಲೂಕು ಪಂಚಾಯ್ತಿ ಸದಸ್ಯೆ ಮಲ್ಲಿಕಾ ಸುರೇಂದ್ರ, ನಿಟ್ಟೂರು ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಸವಿತಾ, ಬಗರ್ ಹುಕುಂ ಸಮಿತಿ ಅಧ್ಯಕ್ಷ ಏರಿಗಿ ಉಮೇಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗರುಡಪ್ಪ ಗೌಡ, ಉಪ ವಿಭಾಗಾಧಿಕಾರಿ ಉದಯ್ ಕುಮಾರ್ ಶೆಟ್ಟಿ ಹಾಜರಿದ್ದರು.

ಗ್ರಾಮ ಪಂಚಾಯ್ತಿ ಸದಸ್ಯ ಚಂದ್ರಶೇಖರ್ ಶೆಟ್ಟಿ ಸ್ವಾಗತಿಸಿದರು. ಕೂಡ್ಲಕೊಪ್ಪ ಸುರೇಶ್ ಪ್ರಾಸ್ತಾವಿಕ ಮಾತನಾಡಿದರು. ದೀಪಕ್ ಸಾಗರ್ ಕಾರ್ಯಕ್ರಮ ನಿರೂಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.