ಹಸಿರು ವಲಯ ನಿರ್ಮಾಣಕ್ಕೆ ಚಾಲನೆ

ಸೋಮವಾರ, ಮೇ 20, 2019
28 °C

ಹಸಿರು ವಲಯ ನಿರ್ಮಾಣಕ್ಕೆ ಚಾಲನೆ

Published:
Updated:

ಹಾಸನ: `ಕಾಲೇಜಿನ ಆವರಣದಲ್ಲಿ ಔಷಧೀಯ ಸಸ್ಯಗಳನ್ನು ನೆಡುವುದರಿಂದ ಆರೋಗ್ಯ ಕಾಪಾಡಿಕೊಳ್ಳಬಹುದು. ಜತೆಗೆ ಉತ್ತಮ ಪರಿಸರದಲ್ಲಿ ವಿದ್ಯಾರ್ಥಿಗಳು ಉತ್ತಮ ಶಿಕ್ಷಣವನ್ನು ಸಹ ಪಡೆಯಬಹುದು~ ಎಂದು ವೈದ್ಯ ಡಾ. ಗುರುರಾಜ ಹೆಬ್ಬಾರ್ ನುಡಿದರು.ನಗರದ ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್.ಎಸ್.ಎಸ್. ವಿಭಾಗದವರು ಶನಿವಾರ ಏರ್ಪಡಿಸಿದ್ದ `ಹಸಿರು ವಲಯ ನಿರ್ಮಾಣ~ ಕಾರ್ಯಕ್ರಮವನ್ನು ಗಿಡನೆಡುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.`ಸಸಿಗಳನ್ನು ನೆಡುವುದರ ಜತೆಗೆ ಅವುಗಳನ್ನು ಕಾಪಾಡಿಕೊಳ್ಳುವುದು ಅಗತ್ಯ~ ಎಂದು ಅವರು ಸಲಹೆ ನೀಡಿದರು.ಮುಖ್ಯ ಅತಿಥಿಯಾಗಿದ್ದ ಪರಿಸರವಾದಿ ಹೆಮ್ಮಿಗೆ ಮೋಹನ್ `ಪರಿಸರವನ್ನು ಉಳಿಸಿ ಬೆಳೆಸುವ ಜವಬ್ದಾರಿ ಇಂದಿನ ಯುವಕರ ಮೇಲಿದೆ~ ಎಂದು ಅವರು  ಹೇಳಿದರು.ಪರಿಸರವಾದಿ ಅನುಗನಾಳು ಕೃಷ್ಣಮೂರ್ತಿ `ಕಾಲೇಜಿನ ಪರಿಸರ ಉತ್ತಮವಾಗಿದ್ದರೆ ಆರೋಗ್ಯವಂತ ವಿದ್ಯಾರ್ಥಿಗಳನ್ನು ಸೃಷ್ಟಿಸಬಹುದು~ ಎಂದರು.ಕಾಲೇಜಿನ ಆವರಣದಲ್ಲಿ ನೆಟ್ಟ ಸಸಿಗಳನ್ನು ಉಪನ್ಯಾಸಕರು ದತ್ತು ಪಡೆದುಕೊಂಡರು.

ಪ್ರಾಂಶುಪಾಲ ಪ್ರೊ. ವಿ. ಕೃಷ್ಣಪ್ಪ, ಸಾಂಸ್ಕೃತಿಕ ವೇದಿಕೆ ಕಾರ್ಯದರ್ಶಿ ಪ್ರೊ. ಕೆ. ಗುರುರಾಜು, ಎನ್‌ಎಸ್ ಎಸ್ ಅಧಿಕಾರಿ ಎಂ.ಕೆ. ಮಹೇಶ್, ಐ.ಕ್ಯೂ.ಎ.ಸಿ ಸಂಚಾಲಕ ಡಾ. ಡಿ. ಶ್ರೀನಿವಾಸ ಹಾಗೂ ಉಪನ್ಯಾಸಕರು ಹಾಜರಿದ್ದರು.

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry