ಶುಕ್ರವಾರ, ಜೂನ್ 18, 2021
24 °C

ಹಸಿರು ಸಂರಕ್ಷಣೆ ಆದ್ಯ ಕರ್ತವ್ಯ: ಸಿದ್ದರಾಮಯ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ಹಿರಿಯ ನಾಗರಿಕರನ್ನು ಗಮನದಲ್ಲಿಟ್ಟುಕೊಂಡು ನಗರದಲ್ಲಿ ಉದ್ಯಾನಗಳನ್ನು ನಿರ್ಮಿಸಬೇಕು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ವತಿಯಿಂದ  ಸರ್ವಜ್ಞ ನಗರ ವ್ಯಾಪ್ತಿ­ಯಲ್ಲಿರುವ   ಬೈಟಗುಂಟೆ­ಪಾಳ್ಯ ಗ್ರಾಮ­ದಲ್ಲಿ ₨52 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡಿರುವ  ಉದ್ಯಾನ ಮತ್ತು ಆಟದ ಮೈದಾನವನ್ನು ಸಾರ್ವಜನಿಕ ಬಳಕೆಗೆ ಮುಕ್ತಗೊಳಿಸಿ ಮಾತನಾಡಿದರು.‘60 ವರ್ಷ ಮೇಲ್ಪಟ್ಟವರು ಬಡಾ­ವಣೆಯಲ್ಲಿರುವ ಉದ್ಯಾನ­ಗಳನ್ನು ಹೆಚ್ಚು ಬಳಕೆ ಮಾಡುತ್ತಿದ್ದಾರೆ. ಅವರ ಮನಸ್ಥಿತಿಗೆ ಅನುಗುಣವಾಗಿ ಉದ್ಯಾನ ನಿರ್ಮಾಣಗೊಳ್ಳಬೇಕು’ ಎಂದು ಆಶಯ ವ್ಯಕ್ತಪಡಿಸಿದರು.‘ನಗರದಲ್ಲಿ ಗಿಡ–ಮರ, ಉದ್ಯಾನಗಳ ಮೂಲಕ ಹಸಿರು ಹೆಚ್ಚಿಸುವ ಕೆಲಸ ಆಗಬೇಕಿದೆ. ಅಲ್ಲದೇ ಕೊರತೆಯಿರುವ ಆಟದ ಮೈದಾನಗಳಿಗೂ ಜಾಗವನ್ನು ಮೀಸಲಿಡಬೇಕಿದೆ’ ಎಂದು ಹೇಳಿದರು.ಗೃಹ ಸಚಿವ ಕೆ.ಜೆ.ಜಾರ್ಜ್‌, ‘ಸರ್ವಜ್ಞನಗರ ವಿಧಾನಸಭಾ ವ್ಯಾಪ್ತಿಯಲ್ಲಿ ಮಕ್ಕಳ ಮಾನಸಿಕ ಹಾಗೂ ದೈಹಿಕ ಬೆಳವಣಿಗೆಗೆ ಅಗತ್ಯವಿರುವ ಆಟದ ಮೈದಾನಗಳ ಕೊರತೆಯಿದ್ದು, ಈ ಬಗ್ಗೆ ಹೆಚ್ಚಿನ ಗಮನ ಹರಿಸಲಾಗುವುದು’ ಎಂದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.