ಸೋಮವಾರ, ಮೇ 16, 2022
28 °C

ಹಾಕಿ: ಎಸ್‌ಎಐ ತಂಡಕ್ಕೆ ಸುಲಭ ಜಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ದರ್ಶನ್ ಅವರು ತಂದಿತ್ತ ಎರಡು ಗೋಲುಗಳ ನೆರವಿನಿಂದ ಎಸ್‌ಎಐ ತಂಡದವರು ಇಲ್ಲಿ ನಡೆಯುತ್ತಿರುವ ಕರ್ನಾಟಕ ರಾಜ್ಯ ಹಾಕಿ ಸಂಸ್ಥೆ ಆಶ್ರಯದ ಡಿ.ಎಸ್. ಮೂರ್ತಿ ಮತ್ತು ವಿ. ಕರುಣಾಕರನ್ ಸ್ಮಾರಕ ಹಾಕಿ ಟೂರ್ನಿಯ ಪಂದ್ಯದಲ್ಲಿ ಗೆಲುವು ಪಡೆದರು.ಅಕ್ಕಿತಿಮ್ಮನಹಳ್ಳಿ ರಾಜ್ಯ ಹಾಕಿ ಸಂಸ್ಥೆ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಪಂದ್ಯದಲ್ಲಿ ಎಸ್‌ಎಐ 3-1 ಗೋಲುಗಳಿಂದ ಪೋಸ್ಟಲ್ ತಂಡವನ್ನು ಮಣಿಸಿತು. ರಫೀಕ್ ಅವರು 7ನೇ ನಿಮಿಷದಲ್ಲಿ ಗೋಲು ಗಳಿಸಿ ಎಸ್‌ಎಐ ತಂಡದ ಗೋಲಿನ ಖಾತೆ ತೆರೆದರು.ಬಳಿಕ ದರ್ಶನ್ 22 ಮತ್ತು 38ನೇ ನಿಮಿಷದಲ್ಲಿ ಚೆಂಡನ್ನು ಗುರಿ ಸೇರಿಸಿ ತಂಡದ ಮುನ್ನಡೆಯನ್ನು 3-0 ಗೆ ಹೆಚ್ಚಿಸಿದರು. ಪೋಸ್ಟಲ್ ತಂಡದ ಏಕೈಕ ಗೋಲನ್ನು ಪ್ರಕಾಶ್ ಅವರು ಪಂದ್ಯದ 56ನೇ ನಿಮಿಷದಲ್ಲಿ ತಂದಿತ್ತರು.ಪಂದ್ಯದ ಮೊದಲ ನಿಮಿಷದಿಂದಲೇ ಎದುರಾಳಿ ಗೋಲುಪೆಟ್ಟಿಗೆ ಗುರಿಯಾಗಿಸಿ ಆಕ್ರಮಣ ನಡೆಸಿದ ಎಸ್‌ಎಐ ತಂಡದವರು ಕೊನೆಯವರೆಗೂ ಪೂರ್ಣ ಮೇಲುಗೈ ಸಾಧಿಸಿದರು. ಪೋಸ್ಟಲ್ ತಂಡ ಹೊಂದಾಣಿಕೆಯ ಪ್ರದರ್ಶನ ನೀಡಲು ವಿಫಲವಾಯಿತು. ಗೋಲು ಗಳಿಸಲು ನಡೆಸಿದ ಯಾವುದೇ ಪ್ರಯತ್ನಕ್ಕೆ ತಕ್ಕ ಫಲ ಲಭಿಸಲಿಲ್ಲ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.