ಮಂಗಳವಾರ, ಮಾರ್ಚ್ 28, 2023
33 °C

ಹಾಕಿ: ಬಿಇಎಂಎಲ್ ತಂಡಕ್ಕೆ ಮಣಿದ ಡಿವೈಎಸ್‌ಎಸ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಮೇಶ್ ಗಳಿಸಿದ ಹ್ಯಾಟ್ರಿಕ್ ಗೋಲುಗಳು ಬಿಇಎಂಎಲ್ ತಂಡದವರು ಕರ್ನಾಟಕ ರಾಜ್ಯ ಹಾಕಿ ಸಂಸ್ಥೆ ಆಶ್ರಯದಲ್ಲಿ ನಡೆದ ‘ಬಿ’ ಡಿವಿಷನ್ ಹಾಕಿ ಲೀಗ್ ಪಂದ್ಯದಲ್ಲಿ ಗೆಲುವು ಸಾಧಿಸಲು ಕಾರಣವಾಯಿತು.ಅಕ್ಕಿ ತಿಮ್ಮನಹಳ್ಳಿ ರಾಜ್ಯ ಹಾಕಿ ಸಂಸ್ಥೆ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಫೈನಲ್ ಪಂದ್ಯದಲ್ಲಿ ಬಿಇಎಂಎಲ್ ತಂಡ 3-0 ಗೋಲಿನಿಂದ ಡಿವೈಎಸ್‌ಎಸ್ ‘ಎ’ ತಂಡದ ಎದುರು ಗೆಲುವು ಪಡೆಯಿತು. ರಮೇಶ್ 14, 22, 54ನೇ ನಿಮಿಷದಲ್ಲಿ ಗೋಲು ತಂದಿತ್ತು ಗೆಲುವಿಗೆ ಕಾರಣರಾದರು. ಡಿವೈಎಸ್‌ಎಸ್ ‘ಎ’ ತಂಡವು ರನ್ನರ್ ಅಪ್ ಸ್ಥಾನಕ್ಕೆ ತೃಪ್ತಿ ಪಡಬೇಕಾಯಿತು.ಡ್ರಾ ಸಾಧಿಸಿದ ಕೆನರಾ ಬ್ಯಾಂಕ್: ಕೆನರಾ ಬ್ಯಾಂಕ್ ತಂಡದವರು ಕರ್ನಾಟಕ ರಾಜ್ಯ ಹಾಕಿ ಸಂಸ್ಥೆ ಆಶ್ರಯದಲ್ಲಿ ನಡೆಯುತ್ತಿರುವ ರಾಜ್ಯ ಸೂಪರ್ ಡಿವಿಷನ್ ಲೀಗ್ ಹಾಕಿ ಪಂದ್ಯಾವಳಿಯಲ್ಲಿ 1-1 ಗೋಲಿನಿಂದ ಪಿಸಿಟಿಸಿ ತಂಡದ ಎದುರು ಡ್ರಾ ಮಾಡಿಕೊಂಡಿತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.