ಹಾಕಿ: ಭಾರತಕ್ಕೆ ಬಂದ ಮೈಕಲ್ ನಾಬ್ಸ್
ನವದೆಹಲಿ (ಪಿಟಿಐ): ರಾಷ್ಟ್ರೀಯ ಹಾಕಿ ತಂಡದ ಮುಖ್ಯ ಕೋಚ್ ಸ್ಥಾನದಿಂದ ವಜಾಗೊಂಡಿರುವ ಮೈಕಲ್ ನಾಬ್ಸ್ ವಾರದ ಬಳಿಕ ಭಾರತಕ್ಕೆ ಬಂದಿದ್ದಾರೆ.
`ಸೋಮವಾರ ನಾಬ್ಸ್ ಇಲ್ಲಿಗೆ ಬಂದಿದ್ದು, ಹಾಕಿ ಇಂಡಿಯಾದ ಅಧಿಕಾರಿಗಳನ್ನು ಭೇಟಿಯಾಗಿದ್ದಾರೆ. ಬಾಕಿ ಉಳಿದಿರುವ ಒಪ್ಪಂದ ವ್ಯವಹಾರವನ್ನು ಪೂರ್ಣಗೊಳಿಸಿ, ಬೆಂಗಳೂರಿನಲ್ಲಿ ಶಿಬಿರದಲ್ಲಿರುವ ಆಟಗಾರರನ್ನು ಭೇಟಿಯಾಗುವ ನಿರೀಕ್ಷೆಯಿದೆ' ಎಂದು ಹಾಕಿ ಇಂಡಿಯಾದ ಪ್ರಧಾನ ಕಾರ್ಯದರ್ಶಿ ನರೀಂದರ್ ಬಾತ್ರಾ ತಿಳಿಸಿದ್ದಾರೆ.ಭಾರತ ತಂಡದ ಕಳಪೆ ಪ್ರದರ್ಶನದ ಕಾರಣ ಅವರನ್ನು ವಜಾ ಮಾಡಲಾಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.