ಭಾನುವಾರ, ಮೇ 9, 2021
26 °C

ಹಾಕಿ: ಭಾರತ ಮಹಿಳೆಯರಿಗೆ ನಿರಾಸೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಓರ್ಡೊಸ್, ಚೀನಾ (ಪಿಟಿಐ): ಭಾರತ ಮಹಿಳಾ ತಂಡ ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಹಾಕಿ ಟೂರ್ನಿಯ ಪಂದ್ಯದಲ್ಲಿ ಸತತ ಎರಡನೇ ಸೋಲು ಅನುಭವಿಸಿತು. ಇದರೊಂದಿಗೆ ಫೈನಲ್ ಪ್ರವೇಶಿಸುವ ಸಾಧ್ಯತೆ ಅಸ್ತಮಿಸಿದೆ.ಮಂಗಳವಾರ ನಡೆದ ಪಂದ್ಯದಲ್ಲಿ ಭಾರತ 0-5 ರಲ್ಲಿ ಜಪಾನ್ ಎದುರು ಪರಾಭವಗೊಂಡಿತು. ಪಾಯಿಂಟ್ ಖಾತೆ ತೆರೆಯಲು ವಿಫಲವಾಗಿರುವ ಭಾರತ ತನ್ನ ಕೊನೆಯ ಲೀಗ್ ಪಂದ್ಯದಲ್ಲಿ ಗುರುವಾರ ಚೀನಾ ತಂಡವನ್ನು ಎದುರಿಸಲಿದೆ.ಜಪಾನ್ ವಿರುದ್ಧದ ಪಂದ್ಯದಲ್ಲಿ ಭಾರತ ಎಲ್ಲ ವಿಭಾಗಗಳಲ್ಲೂ ಕಳಪೆ ಪ್ರದರ್ಶನ ನೀಡಿತು. ಮಿಡ್‌ಫೀಲ್ಡ್‌ನಲ್ಲಿ ಸಾಕಷ್ಟು ಲೋಪಗಳು ಸಂಭವಿಸಿದ ಕಾರಣ ಹೀನಾಯ ಸೋಲು ಎದುರಾಯಿತು.ವಿರಾಮದ ವೇಳೆಗೆ 2-0 ರಲ್ಲಿ ಮುನ್ನಡೆ ಸಾಧಿಸಿದ್ದ ಜಪಾನ್ ತಂಡದ ತಂಡಕ್ಕೆ ರಿಕಾ ಕೊಮಜಾವ ಎರಡು ಗೋಲುಗಳನ್ನು ತಂದಿತ್ತರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.