ಬುಧವಾರ, ಏಪ್ರಿಲ್ 21, 2021
29 °C

ಹಾರಾಡಿ: ಗ್ರಾಮೀಣ ರಸ್ತೆ ಅಭಿವೃದ್ಧಿಗೆ 55ಲಕ್ಷ- ಶಾಸಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬ್ರಹ್ಮಾವರ: ಮುಖ್ಯಮಂತ್ರಿಗಳ ಅನುದಾನದಿಂದ ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ರೂ.55ಲಕ್ಷ ಹಾರಾಡಿ ಪಂಚಾಯಿತಿಗೆ ದೊರೆತಿದೆ ಎಂದು ಶಾಸಕ ಕೆ.ರಘುಪತಿ ಭಟ್ ತಿಳಿಸಿದರು.ಹಾರಾಡಿ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ಅವರು ವಿವಿಧ ಯೋಜನೆಯ ಫಲಾನುಭವಿ ಗಳಿಗೆ ಚೆಕ್, ಬಾಂಡ್‌ಗಳನ್ನು ವಿತರಿಸಿ ಅವರು ಮಾತನಾಡಿದರು.ನಮ್ಮ ಗ್ರಾಮ ನಮ್ಮ ರಸ್ತೆ ಯೋಜನೆಯಡಿ ಈ ವರ್ಷ ಉಡುಪಿ ವಿಧಾನಸಭಾ ಕ್ಷೇತ್ರಕ್ಕೆ 30ಕಿ.ಮೀ ರಸ್ತೆ ಅಭಿವೃದ್ಧಿಗೆ ಅನುದಾನ ದೊರೆತಿದೆ. ಸಕ್ಕರೆ ಕಾರ್ಖಾನೆಯಿಂದ ಹೊನ್ನಾಳಕ್ಕೆ ಹೋಗುವ ಹೊಂಡಮಯ ರಸ್ತೆಯನ್ನು ಇನ್ನೆರಡು ತಿಂಗಳಲ್ಲಿ ದುರಸ್ತಿ ಮಾಡಲಾಗುವುದು. ಗಾಂಧಿನಗರದಲ್ಲಿ ವಾಸವಾಗಿರುವ 50ಕ್ಕೂ ಹೆಚ್ಚು ಕುಟುಂಬಗಳಿಗೆ ಕೂಡಲೇ ಹಕ್ಕು ಪತ್ರ ನೀಡಲು ಪ್ರಯತ್ನಿಸಲಾಗುವುದು ಎಂದರು.ಹಾರಾಡಿ ಗ್ರಾ.ಪಂ ಅಧ್ಯಕ್ಷೆ ಸುಜಾತ, ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಮಂಜುನಾಥಯ್ಯ, ಜಿ.ಪಂ.ಪ್ರಭಾರ ಅಧ್ಯಕ್ಷ ಉಪೇಂದ್ರ ನಾಯಕ್, ಜಿ.ಪಂ. ಸದಸ್ಯೆ ಮಲ್ಲಿಕಾ ಬಾಲಕೃಷ್ಣ ಪೂಜಾರಿ, ತಾ.ಪಂ. ಸದಸ್ಯ ಕೆಶವ ಕುಮಾರ್, ತಹಶೀಲ್ದಾರ್ ಶಂಕರ್ ಶೆಟ್ಟಿ, ಬ್ರಹ್ಮಾವರದ ಎಸ್.ಐ. ಡಿ.ಟಿ.ಪ್ರಭು, ಮೆಸ್ಕಾಂನ ಪ್ರಾಣೇಶ್, ಶಿಶು ಅಭಿವೃದ್ಧಿ ಇಲಾಖೆಯ ಅಧಿಕಾರಿ ಸದಾನಂದ ನಾಯಕ್  ಉಪಸ್ಥಿತರಿದ್ದರು.

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.