ನ್ಯೂಯಾರ್ಕ್ (ಪಿಟಿಐ): ಪ್ರತಿಷ್ಠಿತ ಹಾರ್ವರ್ಡ್ ವಿಶ್ವವಿದ್ಯಾಲಯಕ್ಕೆ ಬಾಂಬ್ ಬೆದರಿಕೆ ಮಾಹಿತಿ ದೊರಕಿದ ಹಿನ್ನೆಲೆಯಲ್ಲಿ ಪೊಲೀಸರು ಸೋಮವಾರ ವಿ.ವಿ ಆವರಣದಲ್ಲಿದ್ದವರನ್ನು ತುರ್ತು ಸ್ಥಳಾಂತರ ಮಾಡಿದ್ದಾರೆ.

ವಿ.ವಿಯ ನಾಲ್ಕು ಕಟ್ಟಡಗಳಲ್ಲಿ ಬಾಂಬ್ ಇರಿಸಲಾಗಿದೆ ಎಂಬ ಮಾಹಿತಿಯು ಹಾರ್ವರ್ಡ್ ವಿ.ವಿ ಪೊಲೀಸರಿಗೆ ದೊರಕಿತ್ತು ಎಂಬ ಸಂದೇಶ ವಿ.ವಿ ವೆಬ್ಸೈಟ್ನಲ್ಲಿತ್ತು. ಈ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಅನಧಿಕೃತ ಮೂಲಗಳಿಂದ ಈ ಮಾಹಿತಿ ಬಂದಿದೆ ಎಂದು ಪೊಲೀಸರು ಹೇಳಿದ್ದಾರೆ.

ಬಾಂಬ್ ಬೆದರಿಕೆ ಹಿನ್ನೆಲೆಯಲ್ಲಿ ಸೋಮವಾರ ನಡೆಯಬೇಕಿದ್ದ ಪರೀಕ್ಷೆಗಳನ್ನು ರದ್ದು ಮಾಡಿರುವುದಾಗಿ ವಿ.ವಿ ಅಧಿಕಾರಿಗಳು ತಿಳಿಸಿದ್ದಾರೆ.

ಸ್ಥಳಕ್ಕೆ ‘ಕೆ–9’ ಭದ್ರತಾ ತಂಡ ಮತ್ತು ಬಾಂಬ್ ನಿಷ್ಕ್ರಿಯ ದಳದವರು ಬಂದಿದ್ದಾರೆ. ಕೇಂಬ್ರಿಜ್ನ 210 ಎಕರೆಗಳಷ್ಟು ವಿಶಾಲ ಪ್ರದೇಶದಲ್ಲಿರುವ ಈ ವಿ.ವಿ ಯಲ್ಲಿ 6,700 ಪದವಿಪೂರ್ವ ತರಗತಿ ವಿದ್ಯಾರ್ಥಿಗಳು, 14,500 ಪದವಿ ವಿದ್ಯಾರ್ಥಿಗಳು, ವೃತ್ತಿ ಪರ ಶಿಕ್ಷಣಾರ್ಥಿಗಳು ಹಾಗೂ ಬೋಧಕ ಮತ್ತು ಬೋಧಕೇತರ ವರ್ಗದವರು ಇದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.