ಶನಿವಾರ, ಫೆಬ್ರವರಿ 27, 2021
27 °C

ಹಾಲಿನ ದರ ಏರಿಕೆ?: ಕೆಎಂಎಫ್‌ ಚಿಂತನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹಾಲಿನ ದರ ಏರಿಕೆ?: ಕೆಎಂಎಫ್‌ ಚಿಂತನೆ

ಬೆಂಗಳೂರು: ಪ್ರತಿ ಲೀಟರ್‌ ಹಾಲಿನ ದರದಲ್ಲಿ ರೂ 4 ಹೆಚ್ಚಳ ಮಾಡಲು ಅನುಮತಿ ನೀಡುವಂತೆ ಕರ್ನಾಟಕ ಹಾಲು ಮಹಾಮಂಡಲವು (ಕೆಎಂಎಫ್‌) ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ.‘ರಾಜ್ಯದಲ್ಲಿ ನಿತ್ಯ 35 ಲಕ್ಷ ಲೀಟರ್‌ನಷ್ಟಿದ್ದ ಹಾಲಿನ ಬೇಡಿಕೆ ಈಗ 68 ಲಕ್ಷ ಲೀಟರ್‌ಗೆ ಹೆಚ್ಚಿದೆ. ಮೂಲಸೌಕರ್ಯ ಅಭಿವೃದ್ಧಿಪಡಿಸುವ ಸಲುವಾಗಿ ಪ್ರತಿ ಲೀಟರ್‌ ಹಾಲಿನ ದರದಲ್ಲಿ ರೂ 4 ಹೆಚ್ಚಳ ಮಾಡುವುದಕ್ಕೆ  ಅನುಮತಿ ನೀಡುವಂತೆ ಸರ್ಕಾರಕ್ಕೆ 5 ತಿಂಗಳ ಹಿಂದೆಯೇ ಪ್ರಸ್ತಾವನೆ ಸಲ್ಲಿಸಿದ್ದೆವು. ಸರ್ಕಾರದ ಅನುಮತಿಗಾಗಿ ಕಾಯುತ್ತಿದ್ದೇವೆ’ ಎಂದು ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕ  ಎಸ್‌.ಎನ್‌.ಜಯರಾಂ ‘ಪ್ರಜಾವಾಣಿ’ಗೆ ತಿಳಿಸಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.