ಶುಕ್ರವಾರ, ಜೂನ್ 25, 2021
26 °C

ಹಾಲಿ 50 ಸಂಸದರಿಗೆ ಟಿಕೇಟ್ ನೀಡದಿರಲು ಕಾಂಗ್ರೆಸ್ ನಿರ್ಧಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ(ಪಿಟಿಐ): ಮೋದಿ ಅಲೆಯ ಭಯದಲ್ಲಿರುವ ಕಾಂಗ್ರೆಸ್‌ ಬರುವ ಲೋಕಸಭಾ ಚುನಾವಣೆಯಲ್ಲಿ ಹಾಲಿ 50 ಸಂಸದರಿಗೆ ಟಿಕೇಟ್ ನೀಡದಿರಲು ನಿರ್ಧರಿಸಿದೆ ಎಂದು ಪಕ್ಷದ ಉನ್ನತ ಮೂಲಗಳು ತಿಳಿಸಿವೆ.ಉತ್ತಮವಾಗಿ ಕೆಲಸ ಮಾಡದ ಸಂಸದರಿಗೆ ಟಿಕೇಟ್‌ನೀಡದಿರಲು ಪಕ್ಷದ ವರಿಷ್ಠೆ ಸೋನಿಯಾಗಾಂಧಿ ನಿರ್ಧರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.ಸುಮಾರು 350 ಕ್ಷೇತ್ರಗಳಲ್ಲಿ ಯುವಕರು ಮತ್ತು ಮಹಿಳೆಯರಿಗೆ ಟಕೇಟ್‌ ನೀಡುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.

ಬಹುತೇಕ ಹೊಸ ಮುಖಗಳಿಗೆ ಮಣೆ ಹಾಕಿ ಎನ್‌ಡಿಎಗೆ ಪ್ರಬಲ ಪೈಪೋಟಿ ನೀಡುವ ರಣತಂತ್ರವನ್ನು ರೂಪಿಸಲಾಗಿದೆ ಎಂದು ಕಾಂಗ್ರೆಸ್‌ಮೂಲಗಳು ತಿಳಿಸಿವೆ.ಸದನದಲ್ಲಿ ಕಡಿಮೆ ಹಾಜರಾತಿ ಇರುವ ಸಂಸದರಿಗೂ ಟಿಕೇಟ್ ಕೈತಪ್ಪುವ ಸಾಧ್ಯತೆಗಳಿವೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.