ಶುಕ್ರವಾರ, ನವೆಂಬರ್ 22, 2019
27 °C

ಹಾವೇರಿಯಲ್ಲಿ ಪೊಲೀಸ್ ಪೇದೆ ಆತ್ಮಹತ್ಯೆ

Published:
Updated:

ಹಾವೇರಿ : ಪೊಲೀಸ್ ಠಾಣೆಯಲ್ಲೇ ಪೇದೆಯೊಬ್ಬ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ ಬೆಳಿಗ್ಗೆ 7 ಗಂಟೆಗೆ ಹಾವೇರಿ ಜಿಲ್ಲೆಯ ತಡಸಾ ಪೊಲೀಸ್ ಠಾಣೆಯಲ್ಲಿ ನಡೆದಿದೆ.ಮೃತ ದುರ್ದೈವಿಯನ್ನು ಗುರುನಾಥ ಮಲ್ಲೆ ಎಂದು ಗುರುತಿಸಲಾಗಿದ್ದು, ಇವರು ಶನಿವಾರ ಬೆಳಿಗ್ಗೆ 7 ಗಂಟೆಗೆ ಠಾಣೆಗೆ ಬಂದ ತಕ್ಷಣವೇ ತಮಗೆ ತಾವೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡರು ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ.ಇವರ ಬಳಿಯೇ ಠಾಣೆಯ ಶಸ್ತ್ರಾಸ್ತ್ರಗಳನ್ನು ಇರಿಸುತ್ತಿದ್ದ ಕೋಣೆಯ ಕೀಲಿಕೈ ಇತ್ತೆಂದು ಹೇಳಲಾಗಿದೆ. ಇವರ ತಂದೆಯೂ ಪೊಲೀಸ್ ಇಲಾಖೆಯಲ್ಲಿ ಹೆಡ್‌ಕಾನ್ಸ್‌ಟೇಬಲ್ ಆಗಿ ಕಾರ್ಯನಿರ್ವಹಿಸುತ್ತಿದ್ದರು.ಮೃತದೇಹವನ್ನು ಹುಬ್ಬಳ್ಳಿಯ ಕಿಮ್ಸ ಆಸ್ಪತ್ರೆಗೆ ಸಾಗಿಸಲಾಗಿದ್ದು, ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.

ಪ್ರತಿಕ್ರಿಯಿಸಿ (+)