ಗುರುವಾರ , ಜೂನ್ 24, 2021
28 °C

ಹಾವೇರಿ ಜಿ.ಪಂ. ಅಧ್ಯಕ್ಷೆ ಸಾವಿತ್ರಿ ತಳವಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹಾವೇರಿ: ಜಿಲ್ಲಾ ಪಂಚಾಯಿತಿಯ ಅಧ್ಯಕ್ಷ ಸ್ಥಾನಕ್ಕೆ ಸೋಮವಾರ ನಡೆದ ಚುನಾವಣೆಯಲ್ಲಿ ಸವಣೂರು ತಾಲ್ಲೂಕಿನ ಹತ್ತಿಮತ್ತೂರ ಕ್ಷೇತ್ರದ ಸಾವಿತ್ರಿ ತಳವಾರ ಅವಿರೋಧವಾಗಿ ಆಯ್ಕೆಯಾದರು.ಪರಿಶಿಷ್ಟ ಪಂಗಡ ಮಹಿಳೆಗೆ ಮೀಸಲಾದ ಅಧ್ಯಕ್ಷ ಸ್ಥಾನಕ್ಕೆ ಅರ್ಹ ಮಹಿಳಾ ಸದಸ್ಯರಾದ ಸಾವಿತ್ರಿ ತಳವಾರ ಹಾಗೂ ಹಿರೇಕೆರೂರ ತಾಲ್ಲೂಕಿನ ಮಾಸೂರು ಜಿ.ಪಂ. ಕ್ಷೇತ್ರದ ಸದಸ್ಯೆ ಸುಜಾತಾ ಕೊಟಗಿಮನಿ ಅವರ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿತ್ತು.ಕೊನೆ ಗಳಿಗೆಯಲ್ಲಿ ಪಕ್ಷದ ಮುಖಂಡರು ಸುಜಾತಾ ಕೊಟಗಿಮನಿ ಅವರನ್ನು ಸ್ಪರ್ಧೆಯಿಂದ ಹಿಂದೆ ಸರಿಸುವಲ್ಲಿ ಯಶಸ್ವಿಯಾದರಲ್ಲದೆ ಸಾವಿತ್ರಿ ತಳವಾರ ಮಾತ್ರ ನಾಮಪತ್ರ ಸಲ್ಲಿಸಬೇಕೆಂದು ತಿಳಿಸಿದ್ದರಿಂದ ಅವರೊಬ್ಬರೇ ನಾಮಪತ್ರ ಸಲ್ಲಿಸಿದರು.ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದ ಬೆಳಗಾವಿ ಪ್ರಾದೇಶಿಕ ಆಯುಕ್ತ ಗಂಗಾರಾಮ ಬಡೇರಿಯಾ ಅವರು ಸಾವಿತ್ರಿ ತಳವಾರ ವರ ಆಯ್ಕೆಯನ್ನು ಘೋಷಿಸಿದರು. ಸಾವಿತ್ರಿ ಅವರ ಅಧಿಕಾರದ ಅವಧಿ ಏಳು ತಿಂಗಳು ಮಾತ್ರ ಇದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.