ಶನಿವಾರ, ಜನವರಿ 25, 2020
28 °C

ಹಾವೇರಿ ಜಿ.ಪಂ. ಅಧ್ಯಕ್ಷ ರಾಜೀನಾಮೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹಾವೇರಿ: ಕಳೆದ 11 ತಿಂಗಳಿನಿಂದ ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾಗಿದ್ದ ಬಿಜೆಪಿಯ ಮಂಜುನಾಥ ಓಲೇಕಾರ ಅವರು ಭಾನುವಾರ ರಾಜೀನಾಮೆ ಸಲ್ಲಿಸಿದ್ದಾರೆ.ಪಕ್ಷದ ವರಿಷ್ಠರ ಸೂಚನೆ ಹಿನ್ನಲೆಯಲ್ಲಿ ತಮ್ಮ ರಾಜೀನಾಮೆ ಪತ್ರವನ್ನು ಜಲ ಸಂಪನ್ಮೂಲ ಸಚಿವರಿಗೆ ಸಲ್ಲಿಸಿದ್ದು. ಅದನ್ನು ಅಂಗೀಕರಿಸುವಂತೆ ಜಲ ಸಂಪನ್ಮೂಲ ಸಚಿವರಿಗೆ ಹಾಗೂ ಪಕ್ಷದ ವರಿಷ್ಠರಲ್ಲಿ ಮನವಿ ಮಾಡಿಕೊಂಡಿದ್ದಾಗಿ ಓಲೇಕಾರ ತಿಳಿಸಿದ್ದಾರೆ.ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯವನ್ನು ಪ್ರಕಟಿಸಿದ ಅವರು, ತಾವು ಅಧಿಕಾರದಲ್ಲಿ ಮುಂದುವರಿಯುವುದರ ಕುರಿತು ಪಕ್ಷದಲ್ಲಿ ಉಂಟಾಗಿದ್ದ ಗೊಂದಲ ನಿವಾರಣೆಗೆ ಹಾಗೂ ಪಕ್ಷದ ಹಿತದೃಷ್ಟಿಯಿಂದ ರಾಜೀನಾಮೆ ಸಲ್ಲಿಸಿರುವುದಾಗಿ ಹೇಳಿದರು.

 

ಪ್ರತಿಕ್ರಿಯಿಸಿ (+)