ಸೋಮವಾರ, ಏಪ್ರಿಲ್ 19, 2021
23 °C

ಹಾಸನ, ಕೊಡಗು ಜಿಲ್ಲೆಯ ಕೆಲವೆಡೆ ಲಘು ಭೂಕಂಪನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಅರಕಲಗೂಡು/ಸೋಮವಾರಪೇಟೆ: ಹಾಸನ ಜಿಲ್ಲೆ ಅರಕಲಗೂಡು ಪಟ್ಟಣ ಮತ್ತು ಸುತ್ತಮುತ್ತಲಿನ ಗ್ರಾಮಗಳು ಹಾಗೂ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಶನಿವಾರಸಂತೆ, ಕೊಡ್ಲಿಪೇಟೆ ಹೋಬಳಿಗಳಲ್ಲಿ ಗುರುವಾರ ಮುಂಜಾನೆ 6.20 ರಲ್ಲಿ ಲಘು ಭೂಕಂಪನದ ಅನುಭವವಾಗಿದೆ. ಇದರಿಂದ ಈ ಭಾಗದ ಜನತೆ ಕೆಲಹೊತ್ತು ಭಯಭೀತರಾಗಿದ್ದರು. ಭೂಕಂಪನದ ತೀವ್ರತೆ ರಿಕ್ಟರ್ ಮಾಪಕದಲ್ಲಿ 3.6 ರಷ್ಟು ದಾಖಲಾಗಿದೆ. ಭೂಕಂಪನದ ಕೇಂದ್ರ ಅರಕಲಗೂಡು ತಾಲ್ಲೂಕಿನ ಮುದಿಗೆರೆ ಗ್ರಾಮ ಎಂದು ಗುರುತಿಸಲಾಗಿದೆ.

ಹೇಮಾವತಿ ಜಲಾಶಯದ ಹಿನ್ನೀರಿನ ಸಮೀಪ ಇರುವ ಈ ಗ್ರಾಮದಲ್ಲಿ ಕಂಪನ ಸಂಭವಿಸುತ್ತಿದ್ದಂತೆ ಜನರು ಆತಂಕಕ್ಕೆ ಒಳಗಾದರು. ಗ್ರಾಮದ ಮೂರು ಮನೆಗಳಲ್ಲಿ ಸಣ್ಣ ಪ್ರಮಾಣದ ಬಿರುಕು ಕಾಣಿಸಿಕೊಂಡಿದೆ.

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.