ಹಾಸನ: ವಿದ್ಯಾರ್ಥಿಗಳಿಂದ ಪ್ರತಿಭಟನೆ

7

ಹಾಸನ: ವಿದ್ಯಾರ್ಥಿಗಳಿಂದ ಪ್ರತಿಭಟನೆ

Published:
Updated:

ಹಾಸನ: ಕಾಲೇಜಿಗೆ ಮಾನ್ಯತೆಯನ್ನು ನೀಡಬೇಕೆಂದು ಆಗ್ರಹಿಸಿ ನಗರದ ಪಶು ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಗಳು ಬುಧವಾರ ಅನಿರ್ದಿಷ್ಟಾವಧಿ ಪ್ರತಿಭಟನೆಯನ್ನು ಆರಂಭಿಸಿದ್ದಾರೆ.ವಿದ್ಯಾರ್ಥಿಗಳು ಕಾಲೇಜಿನ ಪ್ರವೇಶ ದ್ವಾರದಲ್ಲೇ ಒಟ್ಟಾಗಿ ಮಲಗಿ ಘೋಷಣೆಗಳನ್ನು ಕೂಗುತ್ತಿದ್ದು, ಡೀನ್ ಸೇರಿದಂತೆ ಯಾವುದೇ ಉಪನ್ಯಾಸಕರು ಹಾಗೂ ಸಿಬ್ಬಂದಿಯನ್ನು ಒಳಕ್ಕೆ ಹೋಗಲು ಬಿಟ್ಟಿಲ್ಲ.ಕಾಲೇಜಿಗೆ ಮಾನ್ಯತೆ ಇಲ್ಲದೇ ಇರುವುದರಿಂದ ಈಗಾಗಲೇ ಪಾಸಾಗಿ ಹೊರಹೋದ 31 ವಿದ್ಯಾರ್ಥಿಗಳ ಭವಿಷ್ಯ ಅತಂತ್ರವಾಗಿದೆ. ಅವರು ಯಾವುದೇ ಹುದ್ದೆಗೂ ಅರ್ಜಿ ಸಲ್ಲಿಸಲು ಸಾಧ್ಯವಾಗಿಲ್ಲ. ಅಲ್ಲದೇ ಹೊಸ ಪ್ರವೇಶಾತಿಯನ್ನೂ ಕಾಲೇಜು ಮಾಡಿಕೊಂಡಿಲ್ಲ. ಹೀಗಾಗಿ ವಿದ್ಯಾರ್ಥಿಗಳು ಆತಂಕಗೊಂಡು, ಮಾನ್ಯತೆಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಪ್ರತಿಭಟನೆ ಕೈಗೊಂಡಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry