ಶನಿವಾರ, ಏಪ್ರಿಲ್ 17, 2021
32 °C

ಹಾಸನ-ಶ್ರವಣಬೆಳಗೊಳ: ರೈಲು ಸಂಚಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹಾಸನ: ‘ಹಾಸನ- ಶ್ರವಣಬೆಳಗೊಳ ಮಾರ್ಗದಲ್ಲಿ ರೈಲು ಸಂಚಾರಕ್ಕೆ ಯಾವುದೇ ಅಡ್ಡಿ ಇಲ್ಲ. ಈ ಹಳಿಗಳ ತಪಾಸಣೆ ನಡೆಸಿ ಆರು ತಿಂಗಳಲ್ಲಿ ಈ ಮಾರ್ಗದಲ್ಲಿ ರೈಲು ಸಂಚಾರ ಪುನಃ ಆರಂಭಿಸಲಾಗುವುದು’ ಎಂದು ನೈರುತ್ಯ ರೈಲ್ವೆ ಮಹಾಪ್ರಬಂಧಕ ಕುಲದೀಪ ಚತುರ್ವೇದಿ ತಿಳಿಸಿದರು.ಹಾಸನ ರೈಲ್ವೆ ನಿಲ್ದಾಣದಲ್ಲಿ ನಿರ್ಮಿಸಿರುವ ನೂತನ ರೈಲ್ವೆ ವಿಶ್ರಾಂತಿ ಕೊಠಡಿಯನ್ನು ಮಂಗಳವಾರ ಉದ್ಘಾಟಿಸಿದ ಬಳಿಕ ಪತ್ರಕರ್ತರೊಡನೆ ಮಾತನಾಡಿದ ಅವರು ‘ಆರು ತಿಂಗಳಲ್ಲಿ ಈ ಮಾರ್ಗದಲ್ಲಿ ಪ್ರತಿ ನಿತ್ಯ ರೈಲು ಸಂಚಾರ ಆರಂಭವಾಗಲಿದೆ’ ಎಂದರು.ಹಾಸನ- ಶ್ರವಣ ಬೆಳಗೊಳ ಮಧ್ಯೆ ಕಳೆದ ಮಸ್ತಕಾಭಿಷೇಕದ ಸಂದರ್ಭದಲ್ಲಿ ರೈಲು ಸಂಚಾರ ಆರಂಭವಾಗಿತ್ತು. ನಂತರದ ದಿನಗಳಲ್ಲಿ ವಿವಿಧ ಕಾರಣಗಳಿಂದಾಗಿ ಅದು ಸ್ಥಗಿತಗೊಂಡಿತ್ತು. ಹಳಿಗಳು ಈಗಲೂ ಸುಸ್ಥಿತಿಯಲ್ಲಿವೆ ಎಂದು ತಿಳಿಸಿದರು.‘ಮಂಗಳೂರು - ಶ್ರವಣಬೆಳಗೊಳ- ಬೆಂಗಳೂರು ರೈಲು ಮಾರ್ಗದ ಯೋಜನೆಗೆ ಕುಣಿಗಲ್ ಸಮೀಪ ಭೂಸ್ವಾಧೀನ ಪ್ರಕ್ರಿಯೆಗೆ ಸಂಬಂಧಿಸಿದಂತೆ ತೊಂದರೆ ಉಂಟಾಗಿದೆ. ಸರ್ಕಾರ ಭೂಸ್ವಾಧೀನ ಮಾಡಿ ಕೊಟ್ಟ ಬಳಿಕ ರೈಲ್ವೆ ಇಲಾಖೆ ಕಾಮಗಾರಿ ಮುಂದುವರಿಸಲು ಸಾಧ್ಯ’ ಎಂದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.