ಬುಧವಾರ, ಮೇ 12, 2021
24 °C

ಹಾಸ್ಟೆಲ್‌ಗಳು ಬೇಕು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸರ್ಕಾರ ಈ ಬಜೆಟ್‌ನಲ್ಲಿ ಪರಿಶಿಷ್ಟ ಜಾತಿ, ಪಂಗಡದ ನೂತನ ಹಾಸ್ಟೆಲ್‌ಗಳನ್ನು ತೆರೆಯುವ ಪ್ರಸ್ತಾಪ ಮಾಡಿದೆ. ಆದರೆ ಬೆಂಗಳೂರಿನಲ್ಲಿ ಪದವಿ, ಪದವಿಪೂರ್ವ ಹಾಸ್ಟೆಲ್‌ಗಳು ಕೇವಲ ಎರಡೇ ಇವೆ. ಎಂ.ಜಿ. ರಸ್ತೆಯಲ್ಲಿನ ಸರ್ಕಾರಿ ವಿಜ್ಞಾನ ಕಾಲೇಜು ಹಾಸ್ಟಲ್ ಮತ್ತು ಪ್ರಿಮ್‌ರೋಸ್ ರಸ್ತೆಯಲ್ಲಿರುವ ಸರ್ಕಾರಿ ಕಲಾ ಕಾಲೇಜಿನ ವಿದ್ಯಾರ್ಥಿನಿಲಯಗಳು ಮೂಲ ಸೌಕರ್ಯವಿಲ್ಲದೆ ನಲುಗುತ್ತಿವೆ.

 

ಸಮಾಜಕಲ್ಯಾಣ ಇಲಾಖೆಯ ಅಧಿಕಾರಿಗಳ ನಿರ್ಲಕ್ಷ್ಯವೇ ಇದಕ್ಕೆ ಕಾರಣ. ಬೆಂಗಳೂರಿನ ಜನಸಂಖ್ಯೆ ಒಂದು ಕೋಟಿ ಮೀರುತ್ತಿದೆ. ಜನಸಂಖ್ಯೆ ಅನುಗುಣವಾಗಿ ಬೆಂಗಳೂರಿನ ನಾಲ್ಕು ವಿಭಾಗಗಳಲ್ಲಿ ನಾಲ್ಕು ಪದವಿ ಹಾಸ್ಟೆಲ್‌ಗಳು, ಎರಡು ಪದವಿ ಪೂರ್ವ ಹಾಸ್ಟೆಲ್‌ಗಳನ್ನು ನಿರ್ಮಿಸಲು ಮುಖ್ಯಮಂತ್ರಿಗಳು ಆಸಕ್ತಿ ವಹಿಸಬೇಕು.

 

ದೂರದ ಜಿಲ್ಲೆಗಳಿಂದ ಬಂದು ಬೆಂಗಳೂರಿನಲ್ಲಿ ಪ್ರತಿಷ್ಠಿತ ಕಾಲೇಜುಗಳಲ್ಲಿ ವ್ಯಾಸಂಗಕ್ಕೆ ವಸತಿ ನಿಲಯಗಳು ಇಲ್ಲದೆ ಬಹುತೇಕ ಮಂದಿ ಅರ್ಧದಲ್ಲೇ ಶಿಕ್ಷಣದಿಂದ ವಿಮುಖರಾಗುತ್ತಿದ್ದಾರೆ. ಸರ್ಕಾರ ಇದನ್ನು ಗಮನಿಸಲಿ. ಕ್ರಮ ಕೈಗೊಳ್ಳಲಿ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.