ಬುಧವಾರ, ಸೆಪ್ಟೆಂಬರ್ 23, 2020
26 °C

ಹಾಸ್ಟೆಲ್‌ನಲ್ಲಿ ಸಿಗದ ಊಟ: ಆಕ್ರೋಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹಾಸ್ಟೆಲ್‌ನಲ್ಲಿ ಸಿಗದ ಊಟ: ಆಕ್ರೋಶ

ಬಾಗೇಪಲ್ಲಿ: ಪಟ್ಟಣದ ಅಂಬೇಡ್ಕರ್ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವಿದ್ಯಾರ್ಥಿ ನಿಲಯಗಳಲ್ಲಿ ಸರಿಯಾಗಿ ಊಟ ನೀಡುತ್ತಿಲ್ಲ, ಮೂಲಸೌಕರ್ಯಗಳ ಕೊರತೆ ಇದೆ ಎಂದು ಆರೋಪಿಸಿ ದಲಿತ ಸಂಘರ್ಷ ಸಮಿತಿ ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟ ನೇತೃತ್ವದಲ್ಲಿ  ವಿದ್ಯಾರ್ಥಿಗಳು ಸೋಮವಾರ ಸಮಾಜ ಕಲ್ಯಾಣ ಇಲಾಖೆ ಕಚೇರಿ ಎದುರು ಪ್ರತಿಭಟನೆ ನಡೆಸಿದರು.ಪಟ್ಟಣದ ಸಮಾಜ ಕಲ್ಯಾಣ ಇಲಾಖೆ ಎದುರು ಜಮಾಯಿಸಿದ ವಿದ್ಯಾರ್ಥಿಗಳು, ವಿದ್ಯಾರ್ಥಿ ನಿಲಯಗಳಿಗೆ ಸಮರ್ಪಕವಾಗಿ ಸೌಕರ್ಯ ಹಾಗೂ ಊಟ ಕಲ್ಪಿಸದ ಸಮಾಜ ಕಲ್ಯಾಣ ಅಧಿಕಾರಿ, ಹಾಸ್ಟೆಲ್ ಮೇಲ್ವಿಚಾರಕರ ವಿರುದ್ಧ ಘೋಷಣೆ ಕೂಗಿದರು.ದಲಿತ ಸಂಘರ್ಷ ಸಮಿತಿ ಬಿ.ವಿ.ವೆಂಕಟರವಣ ಮಾತನಾಡಿ `ಈಗಾಗಲೇ ಕಾಲೇಜು, ಶಾಲೆ ತರಗತಿ ಆರಂಭವಾಗಿವೆ. ಆದರೆ ಕೆಲವು ವಿದ್ಯಾರ್ಥಿ ನಿಲಯಗಳಲ್ಲಿ ವಿದ್ಯಾರ್ಥಿಗಳಿಗೆ ಪ್ರವೇಶವೇ ನೀಡುತ್ತಿಲ್ಲ. ಇದರಿಂದ ವಿದ್ಯಾರ್ಥಿಗಳು ಪ್ರತಿದಿನ  ದೂರದ ಗ್ರಾಮೀಣ ಪ್ರದೇಶಗಳಿಗೆ ಸಂಚರಿಸಬೇಕಾದ ಅನಿವಾರ್ಯತೆ ಎದುರಾಗಿದೆ ಎಂದು ದೂರಿದರು.ಹಾಸ್ಟೆಲ್‌ಗಳಲ್ಲಿ ಬೆಳಗಿನ ತಿಂಡಿ ಹಾಗೂ ಊಟ ಸಮರ್ಪಕವಾಗಿ ಸಿಗುತ್ತಿಲ್ಲ. ಪ್ರತಿಯೊಬ್ಬ ವಿದ್ಯಾರ್ಥಿಗೆ ಉಚಿತ ತಟ್ಟೆ ವಿತರಿಸಬೇಕು. ಮಲಗಲು ಕೊಠಡಿ ಹಾಗೂ ಮಂಚ ಕಲ್ಪಿಸಬೇಕು. ವಿದ್ಯುತ್ ಸಂಪರ್ಕವನ್ನು ನಿರಂತರವಾಗಿ ಇರುವಂತೆ ನೋಡಿಕೊಳ್ಳಬೇಕು ಎಂದು ಆಗ್ರಹಿಸಿದರು.ದಲಿತ ಸಂಘರ್ಷ ಸಮಿತಿ ತಾಲ್ಲೂಕು ಮುಖಂಡ ಗೂಳೂರು ಲಕ್ಷ್ಮೀನಾರಾಯಣ ಮಾತನಾಡಿ `ಹಾಸ್ಟೆಲ್‌ಗಳಲ್ಲಿ ಬೇಳೆ ಹಾಗು ಅಕ್ಕಿ ಸಮ ರ್ಪಕವಾಗಿ ಬೇಯಿಸದೆ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದೆ.  ಮೇಲ್ವಿಚಾರಕರು ಹಾಸ್ಟೆಲ್‌ನಲ್ಲಿಯೇ ವಾಸ್ತವ್ಯ ಹೂಡಬೇಕು.ಪ್ರತಿ ವಾರಕ್ಕೂಮ್ಮೆ ಸಮಾಜ ಕಲ್ಯಾಣ ಅಧಿಕಾರಿಗಳು ಆಗಮಿಸಿ ಹಾಸ್ಟೆಲ್‌ಗಳಲ್ಲಿನ ಸಮಸ್ಯೆಗಳನ್ನು ಬಗೆಹರಿಸಬೇಕು~ ಎಂದು ತಿಳಿಸಿದರು.ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಅಂಬೇಡ್ಕರ್ ವಿದ್ಯಾರ್ಥಿ ನಿಲಯಗಳ ಮೇಲ್ವಿಚಾರಕರಾ ಯಲ್ಲಪ್ಪ ಹಾಗು ಆಂಜಿನಪ್ಪ, ಹಾಸ್ಟೆಲ್‌ಗಳಲ್ಲಿ ಕೆಲ ವಿದ್ಯಾರ್ಥಿಗಳು ಅಸಭ್ಯ ರೀತಿಯಲ್ಲಿ ವರ್ತಿಸುತ್ತಿದ್ದಾರೆ. ಅದನ್ನು ತಡೆಯಬೇಕಾಗಿದೆ. ಆದರೆ ಇನ್ನು ಮುಂದೆ ಸೌಕರ್ಯ ಹಾಗೂ ಊಟ ಸಮರ್ಪಕವಾಗಿ ವಿತರಿಸಲಾಗುವುದು ಎಂದು ಭರವಸೆ ನೀಡಿದರು.ಪ್ರತಿಭಟನೆಯಲ್ಲಿ  ಮುಖಂಡರಾದ ಜಯಂತ್, ನಾಗರಾಜ್, ಶಿವಪ್ಪ, ನರೇಶ್, ಮಹೇಶ್, ರಮಣಪ್ಪ, ಆದಿ, ನರೇಂದ್ರ, ನವೀನ್, ಶಂಕರ್, ಸಂತೋಷ್, ರಾಮಚಂದ್ರ ಮತ್ತಿತರರು ಉಪಸ್ಥಿತರಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.